ಬೆಂಗಳೂರು ಗ್ರಾಮಾಂತರ | ನಾಲ್ವರು ಬಾಲಕಾರ್ಮಿಕರನ್ನು ರಕ್ಷಿಸಿದ ಅಧಿಕಾರಿಗಳು

Date:

Advertisements

ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಾಲ್ಕು ಜನ ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಅಂಗಡಿ ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ಎರಡು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 20 ಸಾವಿರಕ್ಕಿಂತ ಕಡಿಮೆ ಇಲ್ಲದಂತೆ ಮತ್ತು 50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

Advertisements

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಇದನ್ನು ಓದಿದ್ದೀರಾ? ಕುಂದಾಪುರ | ಶಿಥಿಲಗೊಂಡ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆ: ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿ ಆರ್ ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X