ಬೆಂ.ಗ್ರಾಮಾಂತರ | ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ: ಸಚಿವ ಮುನಿಯಪ್ಪ

Date:

Advertisements

ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ” ನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.

“12ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಮಹಾನ್ ಚೇತನ ಬಸವಣ್ಣನವರು, ಸಾಮಾಜಿಕ ಬದ್ಧತೆ, ಎಲ್ಲರನ್ನು ಸಮಾನತೆಯಿಂದ ಕಾಣುವುದು ಅವರ ಆಶಯವಾಗಿತ್ತು. 12ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಸಂಸದೀಯ ವ್ಯವಸ್ಥೆ ಇತ್ತು. ಬಸವಣ್ಣನವರ ಆಚಾರ ವಿಚಾರಗಳು ವಿಶ್ವದಲ್ಲಿ ಹೆಸರು ಪಡೆದಿವೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳಲ್ಲಿ ಬಸವಣ್ಣನವರೂ ಒಬ್ಬರು” ಎಂದರು.

Advertisements

“ದೇಶದಲ್ಲಿ ಜನರ ಮಧ್ಯೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಶಾಂತಿ ವ್ಯವಸ್ಥೆ ವೃದ್ಧಿಸುವುದನ್ನು ಬಸವಣ್ಣನವರ ವಚನಗಳಲ್ಲಿ ಕಾಣಬಹುದು. ಬಸವಣ್ಣನವರ ಹಲವು ಚಿಂತನೆಗಳು ಈಗ ಕಾನೂನುಗಳಾಗಿವೆ. ಕಾಯಕವೇ ಕೈಲಾಸ, ದಾಸೋಹ ಅವರ ಪ್ರತಿಪಾದನೆಯಾಗಿತ್ತು. ಬಸವಣ್ಣನವರ ಮಾರ್ಗದಲ್ಲಿ ನಡೆಯೋಣ, ಸಾಮಾಜಿಕ ಸಮಾನತೆಯಿಂದ ಬಾಳೋಣ” ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ಎನ್ ಅನುರಾಧ ಮಾತನಾಡಿ, “ವಚನ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುಮೋದನೆ ಆಗಿರುವ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಎಂದು ನಮೂದು ಆಗಿರುವ ಬಸವಣ್ಣನವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಕರ್ನಾಟಕದ ಮೊದಲ ಮಹಾನ್ ಮಾನವತಾವಾದಿ, ಸಮಾಜವಾದಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದಲಿತ ಕುಟುಂಬಗಳ ವಸತಿಗೆ ಭೂಮಿ ನೀಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಮನವಿ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ, ಜನಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X