ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣ ಎಂಬುವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್‌ಪಿ ವಲಿ ಪಾಷಾ, ಡಿವೈಎಸ್‌ಪಿಗಳಾದ ಉಮಾಶಂಕರ್, ರಾಮಕೃಷ್ಣಪ್ಪ ಸೇರಿದಂತೆ ಹಲವು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ; ಪೊಲೀಸರಿಗೆ ಸಿಎಂ ಸೂಚನೆ
ಇದೇ ವೇಳೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸಾರ್ವಜನಿಕರು ಅಧಿಕಾರಿಗಳ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.