ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಂಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಗೇನಹಳ್ಳಿ ಬಳಿ ಗುರುವಾರ ನಡೆದಿದೆ.
ಜಡಗೇನಹಳ್ಳಿ ಸಮೀಪದ ಗೊಣಕನಹಳ್ಳಿಯ ಮನೋಹರ್ (19), ಶ್ವೇತಾ (38) ಮತ್ತು ಸುಕೃತಾ(4) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಅತಿವೃಷ್ಟಿ ನಿರ್ವಹಣೆ: ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
“ಲಾರಿ ಚಾಲಕನ ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣ” ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ಲಾರಿ ಪಲ್ಟಿಯಾಗಿದೆ. ಅಪಘಾತ ಸ್ಥಳದಲ್ಲಿ ಮೃತರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.
ಹೊಸಕೋಟೆ ಸಂಚಾರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.