ಬೆಂಗಳೂರು ಗ್ರಾಮಾಂತರ | ಸಂತೆ ಮೈದಾನದಲ್ಲಿ ಮೂಲಸೌಕರ್ಯ ಮರೀಚಿಕೆ; ವ್ಯಾಪಾರಿಗಳ ಅಳಲು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ (ದೇವನಹಳ್ಳಿ) ಪಟ್ಟಣದಲ್ಲಿ ಪ್ರತಿ ಶುಕ್ರವಾರ ಸಂತೆ ನಡೆಯುತ್ತಿದೆ. ಆದರೆ, ಸಂತೆ ನಡೆಯುವ ಮೈದಾನದಲ್ಲಿ ಅಗತ್ಯ ಮೂಲ ಸೌಕರ್ಯ ಇಲ್ಲದೆ ವ್ಯಾಪಾರಿಗಳು ಹಾಗೂ ಗ್ರಾಹಕರು ನಲುಗುತ್ತಿದ್ದು, ಸಂತೆ ನಡೆಯಲು ಬೇಕಾದ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ವಿದ್ಯುತ್ ದೀಪ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ವಿಜಯಪುರ ಪಟ್ಟಣದ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

“ವಾರಕ್ಕೊಮ್ಮೆ ಇಲ್ಲಿ ಸಂತೆ ನಡೆಯುತ್ತದೆ. ಸಂಜೆ ಸಮಯ ಹೆಚ್ಚು ವ್ಯಾಪಾರ ಆಗುತ್ತದೆ. ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಸಂಜೆಯ ಹೊತ್ತಿನಲ್ಲಿ ಬರುತ್ತಾರೆ. ಇಲ್ಲಿ ಎಪಿಎಂಸಿಯಿಂದ ಸಂತೆ ಮಳಿಗೆ ನಿರ್ಮಾಣ ಮಾಡಿದ್ದಾರೆ. ಆದರೆ, ವಿದ್ಯುತ್ ಸಂಪರ್ಕವಿಲ್ಲ. ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ಸಂಜೆಯಾದರೆ ಕತ್ತಲಲ್ಲಿ ವ್ಯಾಪಾರ ಮಾಡಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ” ಎಂದು ವ್ಯಾಪಾರಿಯೊಬ್ಬರು ಅವಲತ್ತುಕೊಂಡಿದ್ದಾರೆ.

“ಮಹಿಳಾ ವ್ಯಾಪಾರಿಗಳು ಬೆಳಗಿನಿಂದ ರಾತ್ರಿಯವರೆಗೂ ಇಲ್ಲೇ ಇರುತ್ತೇವೆ. ಶೌಚಾಲಯದ ವ್ಯವಸ್ಥೆ ಇಲ್ಲ. ಒಂದೊಂದು ಅಂಗಡಿಗೆ ₹120 ಸುಂಕ ಕಟ್ಟುತ್ತೇವೆ. ಮಳೆ ಬಂದರೆ, ಮಳೆ ನೀರು ನಿಂತುಕೊಳ್ಳುತ್ತೆ. ಇದರಿಂದ ಗ್ರಾಹಕರು ಅಂಗಡಿಗಳ ಕಡೆಗೆ ಬರುವುದಿಲ್ಲ. ವಾಹನದಲ್ಲಿ ತರಕಾರಿ ತರುವುದಕ್ಕೂ ಸಾಧ್ಯವಾಗುತ್ತಿಲ್ಲ” ಎಂದು ಮಹಿಳಾ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಬಗ್ಗೆ ಸುಂಕ ಕಟ್ಟಿಸಿಕೊಳ್ಳುವವರನ್ನು ಕೇಳಿದರೆ, ನಾವು ₹5 ಲಕ್ಷ ಬಂಡವಾಳ ಹಾಕಿದ್ದೇವೆ. ಅದಕ್ಕಾಗಿ ಸುಂಕ ವಸೂಲಿ ಮಾಡಿಕೊಳ್ಳುತ್ತಿದ್ದೇವೆ. ನೀವು ಪುರಸಭೆಯವರನ್ನು ಕೇಳಿ ಎನ್ನುತ್ತಾರೆ. ಪುರಸಭೆಯವರು ನಮಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಕೂಡಲೇ  ಶೌಚಾಲಯ ವ್ಯವಸ್ಥೆ ಒದಗಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

“ಸಂಜೆ ವೇಳೆ ಕತ್ತಲಿರುವ ಕಾರಣ, ನಾವು ಚಾರ್ಜಿಂಗ್ ಲೈಟ್‌ ಇಟ್ಟುಕೊಳ್ಳುತ್ತಿದ್ದೇವೆ. ಆದರೆ, ನಮ್ಮ ಅಂಗಡಿಗಳ ಕಡೆಗೆ ಬರಲು ಸಾಧ್ಯವಾಗದ ಕಾರಣ ಗ್ರಾಹಕರು, ಬೆಳಕಿರುವ ಕಡೆಯಲ್ಲೆ ತರಕಾರಿ ಖರೀದಿಸಿ ಹೋಗುತ್ತಾರೆ. ಇದರಿಂದ  ನಿತ್ಯ ನಷ್ಟ ಉಂಟಾಗುತ್ತಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳು ಯಾರೂ ಈವರೆಗೂ ದೂರು ನೀಡಿರಲಿಲ್ಲ. 6 ತಿಂಗಳ ಹಿಂದೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಕೆಲವರು ರಾತ್ರಿಯ ವೇಳೆ ಬಂದು ವಿದ್ಯುತ್ ದೀಪಗಳನ್ನು ಹೊಡೆದು ಹಾಕಿದ್ದಾರೆ. ಚುನಾವಣೆ ಮುಗಿದ ಕೂಡಲೇ ಸಂತೆ ಮೈದಾನಕ್ಕೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲಾಗವುದು” ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ತಿಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...