ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರದ ಅನ್ನಪೂರ್ಣೇಶ್ವರಿ ಕನ್ವೆನ್ಷನ್ ಹಾಲ್‌ನಲ್ಲಿ ಫೆಬ್ರವರಿ 5ರ ಸೋಮವಾರ ಬೆಳಿಗ್ಗೆ 10ಕ್ಕೆ ಮತ್ತು ಬೂದಿಗೆರೆ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 1ಕ್ಕೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಬೃಹತ್ ಸಮಾವೇಶವನ್ನು ಆಯೋಜಿಸಿದ್ದಾರೆ.
ಆಹಾರ ಮತ್ತು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಉಸ್ತುವಾರಿ ಸಚಿವರ ವಿರುದ್ದ ‘ಗೋಬ್ಯಾಕ್’ ಹೋರಾಟದ ಎಚ್ಚರಿಕೆ
ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾ ಕಾಂಗ್ರೆಸ್ ಕೋರಿದೆ.