ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಮುಳುಗಿ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಕಾರ್ತಿಕ್ (16), ಧನುಷ್ (15), ಗುರುಪ್ರಸಾದ್ (6) ಮೃತ ದುರ್ದೈವಿಗಳು.
ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಮೂವರು ಬಾಲಕರು ನಾಪತ್ತೆಯಾಗಿದ್ದರು. ಇಡೀ ರಾತ್ರಿ ಪೋಷಕರು ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದರೆ, ಬಾಲಕರ ಸುಳಿವು ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಕೆರೆಯಲ್ಲಿ ಬಾಲಕನೊಬ್ಬನ ಮೃತದೇಹ ಪತ್ತೆಯಾಗಿತ್ತು.
ವಿಷಯ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ನಡೆಸಿದಾಗ ಮತ್ತಿಬ್ಬರು ಬಾಲಕರ ಮೃತದೇಹ ಪತ್ತೆಯಾಗಿವೆ. ನೀರಿನಲ್ಲಿ ಆಟವಾಡಲು ಹೋಗಿ ಮೂವರೂ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಮೂವರ ಮೃತ ದೇಹಗಳನ್ನು ಹೊರ ತೆಗೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಕಾಂಪೌಂಡ್ ಕುಸಿದು ಆಟೋ, ಬೈಕ್‌ಗಳಿಗೆ ಹಾನಿ