ಬೆಂಗಳೂರು ಗ್ರಾಮಾಂತರ | ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ 

Date:

ರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಏಪ್ರಿಲ್‌ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ ಹೇಳಿದರು.

- Advertisement -

ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಜಿಲ್ಲಾಡಳಿತ ಕಚೇರಿ ಮೇಲೆ ಮತದಾನ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಅನಾವರಣ ಹಾಗೂ ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಸಧೃಡ ದೇಶ ನಿರ್ಮಾಣ ಮಾಡಲು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ತಪ್ಪದೇ ಪ್ರತಿಯೊಬ್ಬರು ಮತ ಚಲಾಯಿಸಿ” ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ ಎನ್ ಅನುರಾಧ ಮಾತನಾಡಿ, “ಈ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕೆಂಬ ಆಶಯದೊಂದಿಗೆ ಜಿಲ್ಲಾದ್ಯಂತ ಸ್ವೀಪ್ ಸಮಿತಿಯಿಂದ ವಿಭಿನ್ನವಾಗಿ ಸಾಕಷ್ಟು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಪ್ಪದೇ ನಿರ್ಭೀತಿಯಿಂದ ಮತ ಚಲಾಯಿಸಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲಾ ಐಕಾನ್ ಆಗಿ ಕಾಮಿಡಿ ಕಿಲಾಡಿ ನಟ ರಘು, ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಿಂದ ಅದ್ಯ ಮತ್ತು ವಿಕಲಚೇತನರ ಕ್ಷೇತ್ರದಿಂದ ಪ್ಯಾರ ಕ್ರೀಡಾ ಪಟು ಪ್ರಕಾಶ್ ಭಾಗವಹಿಸಿ ಎಲ್ಲರು ತಪ್ಪದೇ ಮತದಾನದ ಹಕ್ಕು ಚಲಾಯಿಸಿ ಎಂದು ಮತದಾನ ಜಾಗೃತಿ ಮೂಡಿಸಿದರು.

ಮತದಾನ ಜಾಗೃತಿಗಾಗಿ ಜಿಲ್ಲಾಧಿಕಾರಿ ಹಾಟ್ ಏರ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವ ಮೂಲಕ ಎಲ್ಲರೂ ಸಹಿ ಹಾಕಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸುಧಾಕರ್ ದುರ್ವರ್ತನೆಗೆ ಬೇಸತ್ತು ಪಕ್ಷಾಂತರ: ಮಾಜಿ ಶಾಸಕ ಬಚ್ಚೇಗೌಡ

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ‌ ಕೆ ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...