ಬೆಂಗಳೂರು ಗ್ರಾಮಾಂತರ | ರುಂಡ ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

Date:

ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ರುಂಡ, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿ ನಡೆದಿದೆ.

- Advertisement -

ಬನ್ನೇರುಘಟ್ಟದ ಜನತಾ ಕಾಲೋನಿಯ ಗೀತಮ್ಮ ಹತ್ಯೆಯಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ. ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಕೈ-ಕಾಲು ಮತ್ತು ತಲೆಯನ್ನು ಕತ್ತರಿಸಿ ಹೊತ್ತೊಯ್ದಿದ್ದಾರೆ. ನಗ್ನ ಮುಂಡವನ್ನು ಮಾತ್ರ ಗೋಣಿ ಚೀಲದಲ್ಲಿ ಹಾಕಿ, ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಗುರುವಾರ ಮನೆಯ ಸುತ್ತಮುತ್ತ ಕೆಟ್ಟ ವಾಸನೆ ಬರುತ್ತಿತ್ತು. ಅನುಮಾನಗೊಂಡ ನೆರೆಹೊರೆಯವರು ಮನೆಯನ್ನು ಪರಿಶೀಲಿಸಿದಾಗ ಮುಂಡ ಮತ್ತೆಯಾಗಿದೆ.

ಗೀತಮ್ಮ ಖಾಸಗಿ ಕಂಪನಿಯೊಂದರಲ್ಲಿ ಹೌಸ್‌ಕೀಪಿಂಗ್‌ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ತಮ್ಮ ಮನೆಯ ಎರಡು ಪೋರ್ಷನ್‌ಗಳನ್ನು ಯುವಕರಿಗೆ ಬಾಡಿಗೆ ನೀಡಿದ್ದರು. ಆ ಯುವಕರ ಪೋನ್‌ಗಳು ಸ್ವಿಚ್‌ಆಫ್‌ ಆಗಿದ್ದು, ಅವರೇ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಕೃತ್ಯ ಎಸಗಿ ಮೂರು ದಿನಗಳಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. “ಹತ್ಯೆಯ ಬಗ್ಗೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಕೃತ್ಯಕ್ಕೆ ಕಾರಣವೇನು ಎಂಬುದು ತನಿಖೆ ನಂತರ ತಿಳಿಯಲಿದೆ” ಎಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...