ಬೆಂಗಳೂರು | ಎಸ್ಎಫ್ಐ ನಿಯೋಗದಿಂದ ಪರಿಶಿಷ್ಟ ಪಂಗಡ ನಿರ್ದೇಶಕರ ಭೇಟಿ

Date:

ರಾಜ್ಯದ ಪರಿಶಿಷ್ಟ ಪಂಗಡ ಇಲಾಖೆಗೆ ನೂತನವಾಗಿ ರಾಜ್ಯ ನಿರ್ದೇಶಕರಾಗಿ ನೇಮಕವಾಗಿರುವ ಕಲ್ಲೇಶ ಅವರನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ರಾಜ್ಯದ ಹಲವು ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಬೆಂಗಳೂರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ರಾಜ್ಯದಲ್ಲಿನ ಪರಿಶಿಷ್ಟ ಪಂಗಡ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು, ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ಎಸ್‌ಟಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಚಿಕನ್ ಊಟ ಸೇವಿಸಿ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆಯಾಗಿ ವಾಂತಿ ಭೇದಿಯಿಂದ ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಾದ ಪ್ರಕರಣದ ಬಗ್ಗೆ, ಬಳ್ಳಾರಿ ನಗರದ ಕೌಲಬಜಾರ ಎಸ್‌ಟಿ ಬಾಲಕರ ಹಾಸ್ಟೆಲ್ ಪ್ರಕರಣ ಕುರಿತು ಎಸ್ಎಫ್ಐ ನಿಯೋಗದಿಂದ ಚರ್ಚೆ ನಡೆಯಿತು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆ ಹೆಚ್ಚಳ ಮಾಡಿ ಮಂಜೂರು ಮಾಡಲು ಆಗ್ರಹ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಪದಾಧಿಕಾರಿಗಳಾದ ಗಣೇಶ ರಾಠೋಡ್, ರಮೇಶ ವೀರಾಪುರ, ಗದಗ ಜಿಲ್ಲೆಯ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...