ಬೆಂಗಳೂರು | ಯುವ ಮತದಾರರ ಮತ ಪಟ್ಟಿ ಸೇರ್ಪಡೆಗೆ ವಿಶೇಷ ನೋಂದಣಿ ಅಭಿಯಾನ ಆರಂಭ

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ಯುವಮತದಾರರ ವಿಶೇಷ ನೋಂದಣಿ ಅಭಿಯಾನ ಡಿಸೆಂಬರ್‌ 2ರಿಂದ ಆರಂಭವಾಗಿದ್ದು, ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಅಭಿಯಾನ ಆಯೋಜಿಸಿವೆ.

- Advertisement -

ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನೂ ಸ್ವೀಕರಿತ್ತಿದ್ದಾರೆ. ಸ್ಥಳಗಳಿಗೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಭಾಗವಾಗಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಜಿಲ್ಲಾ ಚುನಾವಣಾ ಕಚೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. 18 ವರ್ಷ ತುಂಬುವ ಎಲ್ಲರೂ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಲ್ಕು ರಾಜ್ಯಗಳಲ್ಲಿ ಫಲಿತಾಂಶ – ಬಿಜೆಪಿ ಮುನ್ನಡೆ: ವಿಪಕ್ಷ ನಾಯಕ ಆರ್ ಅಶೋಕ್

“2024ರ ಜನವರಿ 1ಕ್ಕೆ 18 ವರ್ಷ ತುಂಬುವ ಎಲ್ಲ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಫಾರಂ-6ನ್ನು ಭರ್ತಿ ಮಾಡಿ ಸಲ್ಲಿಸಬೇಕು. ವೆಬ್‌ ಪೋರ್ಟಲ್‌ voters.eci.gov.in ಅಥವಾ Voter Helpline ಮೊಬೈಲ್‌ ಆ್ಯಪ್‌ ಮೂಲಕ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...