ಬೆಂಗಳೂರು | ನಕಲಿ ದಾಖಲೆ ಸೃಷ್ಟಿ ಮಾಡಿಕೊಡುತ್ತಿದ್ದ ಶ್ರೀಕೃಷ್ಣ ಕಂಪ್ಯೂಟರ್ ಅಂಗಡಿ ಮಾಲೀಕನ ಬಂಧನ

Date:

ವಿದೇಶಿಯರಿಗೆ ನಕಲಿ ದಾಖಲೆಗಳನ್ನು ತಯಾರು ಮಾಡಿಕೊಡುತ್ತಿದ್ದ ಓರ್ವನನ್ನು ಗಂಗಮ್ಮ ಗುಡಿ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಮೂರ್ತಿ ಬಂಧಿತ ಆರೋಪಿ. ಈತನು ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು.

ಬಂಧಿತ ಆರೋಪಿ ಕೃಷ್ಣಮೂರ್ತಿ ವಿದೇಶಿಗರಿಗೆ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿದಂತೆ ಇನ್ನಿತರ ನಕಲಿ ದಾಖಲೆಗಳನ್ನು ತಯಾರು ಮಾಡಿ ಕೊಡುತ್ತಿದ್ದನು. ನಕಲಿ ಕಾರ್ಡ್‌ ಮಾಡಿಕೊಟ್ಟು ಅಧಿಕ ಹಣ ಸಂಪಾದನೆ ಮಾಡುತ್ತಿದ್ದನು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿ ಕೃಷ್ಣಮೂರ್ತಿ ಅಂಗಡಿ ಮೇಲೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಗಂಗಮ್ಮ ಗುಡಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು, “ಮಾಹಿತಿ ಬಂದ ಮೇರೆಗೆ ನಕಲಿ ದಾಖಲೆಗಳನ್ನು ತಯಾರು ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೀಪಾವಳಿ ಹಬ್ಬಕ್ಕೆ ಎರಡು ನಗರಗಳಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು: ಯಾವ ನಗರ ಇಲ್ಲಿದೆ ನೋಡಿ?

ಈ ಹಿಂದೆ, ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ ಮೇಲೆ ಸಚಿವ ಭೈರತಿ ಸುರೇಶ್‌ ಅವರ ಆಪ್ತ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.

ದುಡ್ಡು ಕೊಟ್ಟರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ, ಮೌನೇಶ್‌ ಕುಮಾರ್‌, ಭಗತ್‌ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದಿದ್ದರು. ಇವರಲ್ಲಿ ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದು, ಅವರ ಜೊತೆಗಿನ ಸಾಕಷ್ಟು ಫೋಟೋಗಳು ವೈರಲ್‌ ಆಗುತ್ತಿದ್ದವು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ...

ವಿಜಯಪುರ | ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...

ಪೋಕ್ಸೊ ಪ್ರಕರಣ | ಯಡಿಯೂರಪ್ಪರನ್ನು ಬಂಧಿಸಬೇಕು ಎಂದು ನಾನು ಹೇಳಲು ಆಗುವುದಿಲ್ಲ: ಸಚಿವ ಪರಮೇಶ್ವರ್

ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ...