ಬೆಂಗಳೂರು | ಮೆಟ್ರೋ ಫೀಡರ್ ಬಸ್ ಆರಂಭ; ವಾರಕ್ಕೆ ಎರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಪ್ರತಿಜ್ಞೆ ಮಾಡಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಟ್ರಾಫಿಕ್ ನಿಯಂತ್ರಣಕ್ಕೆ ತರಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಅಕ್ಟೋಬರ್ 9ರಿಂದ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು ಚಲಘಟ್ಟ-ಕೆಂಗೇರಿ ನಡುವೆ ಮೆಟ್ರೋ ರೈಲುಗಳ ಸಂಚಾರ ಆರಂಭಿಸಲಾಗಿದೆ. ಈ ಬೆನ್ನಲ್ಲೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೊಸ ಮೆಟ್ರೋ ಫೀಡರ್ ಬಸ್‌ ಸೇವೆ ಆರಂಭಿಸಿದೆ.

ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆ ಸಮಸ್ಯೆಯು ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡಿದೆ. ನಿತ್ಯ ಕೆಲಸಕ್ಕೆ ತೆರಳುವವರು, ಶಾಲಾ-ಕಾಲೇಜುಗಳಿಗೆ ತೆರಳುವವರು ಈ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ.

ಬೆಂಗಳೂರಿನಲ್ಲಿ ಕೇವಲ 10 ಕಿಲೋ ಮೀಟರ್ ಪ್ರಯಾಣ ಮಾಡುವುದಕ್ಕೆ ಗಂಟೆಗಟ್ಟಲೆ ಸಮಯ ತೆಗೆದುಕ್ಕೊಳ್ಳುತ್ತಿದೆ. ಇತ್ತೀಚೆಗೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ, ಲಕ್ಷಾಂತರ ಜನ ತಮ್ಮ ಊರುಗಳಿಗೆ ತೆರಳಲು ಒಮ್ಮೆಲೆ ರಸ್ತೆಗೆ ಇಳಿದಿದ್ದರು. ಈ ವೇಳೆ 8 ಕಿ.ಮೀ ಕ್ರಮಿಸಲು ಬರೋಬ್ಬರಿ 3 ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನಲ್ಲಿ ಪ್ರತಿನಿತ್ಯ ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಮೆಟ್ರೊ, ಬಿಡಿಎ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿವೆ ಹಾಗೂ ಕೊವೀಡ್ ಸಮಯದಲ್ಲಿ ಲಾಕಡೌನ್‌ನಿಂದ ಹಲವು ಜನ ವರ್ಕ್‌ ಫ್ರಂ ಹೋಮ್‌ ಕೆಲಸ ಮಾಡುತ್ತಿದ್ದರು. ಇದೀಗ ಎಲ್ಲ ಐಟಿ ಉದ್ಯೋಗಿಗಳು ಕಚೇರಿಗಳ ಕಡೆಗೆ ಆಗಮಿಸುತ್ತಿದ್ದಾರೆ. ಅಲ್ಲದೆ, ನಗರದಲ್ಲಿರುವ ಬಹುತೇಕರು ಸ್ವಂತ ವಾಹನ ತೆಗೆದುಕೊಂಡು ರಸ್ತೆಗೆ ಇಳಿಯುತ್ತಿದ್ದಾರೆ. ಇದು ಸಂಚಾರ ದಟ್ಟಣೆಗೆ ಪ್ರಮುಖ ಕಾರಣವಾಗಿದೆ.

ಈ ಹಿನ್ನೆಲೆ, ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದೀಗ ನೇರಳೆ ಮಾರ್ಗದ ಮೆಟ್ರೋ ಆರಂಭವಾದ ಬೆನ್ನಲ್ಲೇ, ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಎಂಟಿಸಿ ನೂತನ ಮೆಟ್ರೋ ಫೀಡರ್ ಸೇವೆ ಆರಂಭಿಸಿದೆ.

ನೂತನ ಮೆಟ್ರೋ ಫೀಡರ್ ಮಾರ್ಗಕ್ಕೆ ಬಿಎಂಟಿಸಿ 38 ಹೆಚ್ಚುವರಿ ಬಸ್ ಸೇವೆಯನ್ನು ಆರಂಭಿಸಿದೆ. ಕೆ.ಆರ್.ಪುರ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ ಮತ್ತು ಕಾಡುಗೋಡಿಯಿಂದ ಮಾರತ್ತಳ್ಳಿಯವರೆಗೆ ಎಸಿ, ನಾನ್ ಎಸಿ, ಬಿಎಂಟಿಸಿ ಬಸ್ ಸೇವೆ ಆರಂಭಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಖಾಸಗಿ ಫೋಟೋ ಹರಿಬಿಟ್ಟು, ಪೊಲೀಸರಿಗೆ ದೂರು ಕೊಟ್ಟಿದ್ದ ದುರುಳನ ಬಂಧನ

  • ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಿಂದ ಮಹದೇವಪುರ, ಮಾರತ್ ಹಳ್ಳಿ ಬಿಡ್ಜ್‌, ಕಾಡು ಬೀಸನಹಳ್ಳಿ, ಅಗರ ಮಾರ್ಗವಾಗಿ ಸೆಂಟ್ರಲ್‌ ಸಿಲ್ಕ್‌ ಬೊರ್ಡ್‌ಗೆ ತೆರಳಲಿದೆ. (ಮಾರ್ಗ ಸಂಖ್ಯೆ-ವಿ-ಎಂಎಫ್-1ಸಿ)
  • ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಿಂದ ಮಹದೇವಪುರ, ಕುಂದಲಹಳ್ಳಿ ಗೇಟ್, ಗ್ರಾಫೈಟ್ ಇಂಡಿಯಾ, ಗರುಡಾಚಾರ್‌ಪಾಳ್ಯ ಮಾರ್ಗವಾಗಿ ಮತ್ತೆ ಕೆ.ಆರ್.ಪುರಂ ಮೆಟ್ರೋ ನಿಲ್ದಾಣ ತಲುಪಲಿದೆ. (ಮಾರ್ಗ ಸಂಖ್ಯೆ- ವಿ-ಎಂಎಫ್-2)
  • ಕಾಡುಗೋಡಿಯಿಂದ ಹೋಫ್‌ಫಾರಂ, ಐಟಿಪಿಎಲ್, ಗ್ರಾಫೈಟ್ ಇಂಡಿಯಾ, ಎಇಸಿಎಸ್ ಲೇಔಟ್, ಕುಂದಲಹಳ್ಳಿ ಗೇಟ್ ಮಾರ್ಗವಾಗಿ ಮಾರತ್ ಹಳ್ಳಿ ತಲುಪಲಿದೆ. (ಮಾರ್ಗ ಸಂಖ್ಯೆ-ವಿ-ಎಂಎಫ್-3)
  • ಕಾಡುಗೋಡಿಯಿಂದ ಹೋಫ್‌ಫಾರಂ, ಸಿದ್ದಾಪುರ, ವರ್ತೂರ್ ಮಾರ್ಗವಾಗಿ ಮರಳಿ ಮಾರತ್ ಹಳ್ಳಿ ತಲುಪಲಿದೆ. (ಮಾರ್ಗ ಸಂಖ್ಯೆ- ವಿ-ಎಂಎಫ್-4)

ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ

ಸಂಚಾರ ದಟ್ಟಣೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ವಾರಕ್ಕೆ ಎರಡು ಬಾರಿಯಾದರೂ ಸಾರ್ವಜನಿಕರ ಸಾರಿಗೆಯನ್ನು ಬಳಸುವಂತೆ ಬಿಎಂಟಿಸಿ ತಿಳಿಸಿದೆ.

ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ಚಲ್ಲಘಟ್ಟದವರೆಗಿನ ನೇರಳೆ ಮಾರ್ಗವು ಒಟ್ಟು 43.49 ಕಿಮೀ ಉದ್ದ ಮತ್ತು 37 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...