ಸ್ವಾಮಿ ವಿವೇಕಾನಂದರ 162ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಮತ್ತು ಸಂಸದೆ ಪ್ರಿಯಾಂಕ ಗಾಂಧಿಯವರ ಜನ್ಮದಿನವನ್ನು ಕಾಂಗ್ರೆಸ್ ಕಾರ್ಯಕರ್ತರು ಅಂಧರ ಶಾಲೆಯಲ್ಲಿ ಅಂಧ ಮಕ್ಕಳೊಂದಿಗೆ ಆಚರಿಸಿಕೊಂಡರು.
ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅಂದಿನ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿ ರವರು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯುವ ಪೀಳಿಗೆಗೆ ಸ್ವಾಮಿ ವಿವೇಕಾನಂದರ ಆದರ್ಶ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಉತ್ತಮ ಭಾರತದ ನಿರ್ಮಾಣಕ್ಕೆ ಪಣತೊಡಲು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದರು.
ಸ್ವಾಮಿ ವಿವೇಕಾನಂದರ ಹೆಸರು ಕೇಳಿದ ಕೂಡಲೇ ಪ್ರತಿಯೊಬ್ಬ ಯುವಕನಿಗೂ ಮತ್ತು ಭಾರತೀಯರಿಗೂ ಅತ್ಯಂತ ರೋಮಾಂಚನ ಉಂಟಾಗುತ್ತದೆ. ಅವರ ನೀತಿ ತತ್ವ ಬೋಧನೆ ಇಂದಿಗೂ ದೇಶದ ಪ್ರತಿಯೊಬ್ಬರೂ ಅದನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು.

ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದರು. ಅವರ ಒಂದೊಂದು ನುಡಿ ಮುತ್ತುಗಳು ಯುವಕರ ದಾರಿಗೆ ಹಾಗೂ ದೇಶದ ಅಭಿವೃದ್ಧಿಗೆ, ಜಾತ್ಯತೀತ ದೇಶ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದೆ ಎಂದರು.
ಸ್ವಾಮಿ ವಿವೇಕಾನಂದರನ್ನ ಇಡೀ ವಿಶ್ವವೇ ಮೆಚ್ಚುತ್ತದೆ. ಸಣ್ಣ ವಯಸ್ಸಿನಲ್ಲಿ ಅಗಲಿದರೂ ಸಹ ಅವರ ದೂರ ದೃಷ್ಟಿಯ ಮಾತುಗಳು ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಸ್ವಾಮಿ ವಿವೇಕಾನಂದರ ಬಗ್ಗೆ ಅತಿ ಹೆಚ್ಚು ಕಾಳಜಿಯನ್ನು ಹೊಂದಿದ್ದ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ದೇಶದ ಎಲ್ಲೆಡೆ ಆಚರಿಸಲು ಘೋಷಣೆ ಮಾಡಿದರು ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಪಿಸ್ತೂಲು ತೆಗೆದುಕೊಂಡು ಹೋಗಿದ್ದೆ: ಯುವಿ ತಂದೆ ಯೋಗರಾಜ್ ಸಿಂಗ್ ಹೇಳಿಕೆ
ಕಾಂಗ್ರೆಸ್ ಪಕ್ಷದ ನಾಯಕಿ ವಯನಾಡಿನ ಸಂಸದೆ ಪ್ರಿಯಾಂಕಾ ಗಾಂಧಿಯವರ ಜನ್ಮದಿನವನ್ನು ಸಹ ಅಂಧ ಮಕ್ಕಳೊಂದಿಗೆ ಇದೇ ವೇಳೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂಧ ಮಕ್ಕಳು ಇಬ್ಬರಿಗೂ ಸಹ ಜನ್ಮದಿನದ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಪ್ರಕಾಶ್, ಹೇಮರಾಜ್, ಕೆ.ಟಿ.ನವೀನ್ ಚಂದ್ರ, ಪುಟ್ಟರಾಜು, ರವಿಕುಮಾರ್, ನವೀನ್ ಸಾಯಿ, ವಾಸುದೇವ, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
