ಬೆಂಗಳೂರು | ವೈದ್ಯರ ನಿರ್ಲಕ್ಷದಿಂದಾಗಿ ಹತ್ತು ವರ್ಷದ ಬಾಲಕ ಸಾವು

Date:

ವೈದ್ಯರ ನಿರ್ಲಕ್ಷದಿಂದಾಗಿ ಹತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪ್ರೀತಮ್ ನಾಯ್ಕ್(10) ಮೃತ ಬಾಲಕ. ಈತ ಬೆಂಗಳೂರಿನ ಕೋಣನಕುಂಟೆ ನಿವಾಸಿ. ಅ.6ರಂದು ಬಾಲಕ ಪ್ರೀತಮ್‌ಗೆ ಜ್ವರ ಬಂದಿತ್ತು. ಹಾಗಾಗಿ, ಕುಟುಂಬದವರು ಬಾಲಕನನ್ನು ಹತ್ತಿರದ ರಾಜನಂದಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ವೈದ್ಯರು ಇಂಜಕ್ಷನ್ ಮಾಡಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಮರುದಿನ ಇಂಜಕ್ಷನ್ ನೀಡಿದ ಜಾಗದಲ್ಲಿ ಬಾಲಕನಿಗೆ ಊತ ಮತ್ತು ನೋವು ಕಾಣಿಸಿಕೊಂಡಿದೆ. ಗಾಬರಿಗೊಂಡ ಪೋಷಕರು ಬಾಲಕನನ್ನು ಮತ್ತೆ ರಾಜನಂದಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಕೆಲವೊಂದು ಮೆಡಿಸಿನ್ ಮತ್ತು ಟಾನಿಕ್ ಕೊಟ್ಟು ಕಳುಹಿಸಿದ್ದಾರೆ. ಆದರೆ, ಮರುದಿನವೂ ನೋವು ಕಡಿಮೆಯಾಗದೇ ಊತ ಹೆಚ್ಚುತ್ತಾ ಹೋಗಿದೆ. ಇದರಿಂದ ಗಾಬರಿಗೊಂಡ ಪೋಷಕರು ಮತ್ತೆ ರಾಜನಂದಿನಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ಇಲ್ಲಿ ಚಿಕಿತ್ಸೆ ನೀಡಲು ಆಗುವುದಿಲ್ಲ. ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅ.8 ರಂದು ಸ್ಥಳೀಯ ಆಸ್ಪತ್ರೆ ವೈದ್ಯರ ಸೂಚನೆ ಮೇರೆಗೆ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿದೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಬಾಲಕನಿಗೆ ಸರ್ಜರಿ ಮಾಡಲಾಗಿದ್ದು, ಈ ವೇಳೆ, ಬಾಲಕನಿಗೆ ಕಿಡ್ನಿ ವೈಫಲ್ಯ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹70 ಕೋಟಿ ಮೌಲ್ಯದ ಸರ್ಕಾರಿ ಜಮೀನು ಭೂ ಒತ್ತುವರಿ ತೆರವು

ನಂತರ ಅ.9ರಂದು ಬಾಲಕನನ್ನು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲು ಹೋಗುತ್ತಿದ್ದಾಗ ದಾರಿ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಪೋಷಕರು ರಾಜನಂದಿನಿ ಆಸ್ಪತ್ರೆ ವೈದ್ಯರ ವಿರುದ್ದ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಠಾಣೆಯಲ್ಲಿ ಸಿಆರ್‌ಪಿಸಿ (CRPC) 174C ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...