ಬೆಂಗಳೂರು | ಓವರ್ ಟೇಕ್ ಭರದಲ್ಲಿ ಸ್ಕಿಡ್ ಆದ ಬೈಕ್; ರಸ್ತೆಗೆ ಬಿದ್ದ ಸವಾರನ ಮೇಲೆ ಹರಿದ ಬಸ್

Date:

ಓವರ್ ಟೇಕ್ ಮಾಡುವ ಭರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ನಗರದ ಯಲಹಂಕದ ಅಟ್ಟೂರಿನ ಮದರ್ ಡೈರಿ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭರತ್ ಅವರು ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಮದರ್ ಡೈರಿ ಬಳಿ ತೆರಳುತ್ತಿದ್ದರು. ಕಿರಿದಾದ ರಸ್ತೆಯಲ್ಲಿ ಹೋಗುತ್ತಿದ್ದ ಬಿಎಂಟಿಸಿ ಬಸ್ ಅನ್ನು ಓವರ್ ಟೇಕ್ ಮಾಡಲು ಭರತ್ ಮುಂದಾಗಿದ್ದಾರೆ. ಈ ವೇಳೆ, ಬಸ್‌ಗೆ ಅವರ ಬೈಕ್ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ಭರತ್ ಕೆಳಗೆ ಬಿದ್ದಿದ್ದಾರೆ. ಕ್ಷಣಾರ್ಧದಲ್ಲಿ ಅವರ ಮೇಲೆ ಬಸ್ ಹರಿದಿದೆ.

ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಭರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಮೃತದೇಹ ಪತ್ತೆ

ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕ ಪರಾರಿಯಾಗಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...