ಬೆಂಗಳೂರು | ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪದಿಂದ ಕಂಪನಿಗೆ ಬೆಂಕಿ ಇಟ್ಟ ಉದ್ಯೋಗಿಗಳು

Date:

ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪಗೊಂಡ ಉದ್ಯೋಗಿಗಳು ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಈ ಘಟನೆ ಸೆ.27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ­­­ಉಮಾಶಂಕರ್ ಮತ್ತು ರೂಪ ಎಂಬುವವರ ಒಡೆತನದ ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಆರೋಪಿ ರಾಹುಲ್ ಪೂಜಾರಿ ಏರಿಯಾ ಸೇಲ್ಸ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನೋರ್ವ ಆರೋಪಿ ಲ್ಯಾವ್‌ಸನ್ ಪೀಟರ್ ಜಾನ್ ರೀಜಿನಲ್ ಸೇಲ್ಸ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದ. ಈ ಇಬ್ಬರು ಟಾರ್ಗೆಟ್‌ ರೀಚ್ ಮಾಡಿಲ್ಲ ಎಂದು ಕಂಪನಿ ಈ ಇಬ್ಬರನ್ನು ಕೆಲಸದಿಂದ ತೆಗೆದು ಹಾಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಳಿಕ, ಕಂಪನಿಯ ಮಾಲೀಕ ರೂಪಾ ಅವರಿಗೆ ರಾಹುಲ್ ಮತ್ತು ಲ್ಯಾವ್ಸನ್ ಕರೆ ಮಾಡಿ ಸಂಬಳ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ, ರೂಪ ಮತ್ತು ಉಮಾಶಂಕರ್ ಸಂಬಳ ನೀಡಲು ನಿರಾಕರಿಸಿದ್ದಾರೆ.

ಇದಕ್ಕೆ ಕೋಪಗೊಂಡ ಆರೋಪಿಗಳು ಸೆ.27 ರಂದು ಬೆಳಿಗ್ಗೆ 10.30ಕ್ಕೆ ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಗೆ ಬಂದಿದ್ದಾರೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮುನ್ನಿ ಎಂಬಾಕೆಯನ್ನು ಹೊರಗೆ ಬರುವಂತೆ ಹೇಳಿ, ಪೆಟ್ರೋಲ್ ಸುರಿದು ಕಂಪನಿಗೆ ಬೆಂಕಿ ಹಚ್ಚಿದ್ದಾರೆ.

ಘಟನೆ ವೇಳೆ, ಕಂಪನಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸುಟ್ಟು ಕರಕಲಾಗಿವೆ. ಪೀಠೋಪಕರಣಗಳು ಸೇರಿದಂತೆ ಒಟ್ಟು ಕಂಪನಿಯಲ್ಲಿ ₹11 ಲಕ್ಷ ಬೆಲೆ ಬಾಳುವ ವಸ್ತುಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಈ ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...