ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವು; ಚಾಲಕ ವಶಕ್ಕೆ

Date:

ಕೆಎಸ್‌ಆರ್‌ಟಿಸಿ ಬಸ್ ಚಕ್ರ ಹರಿದು ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ನಡೆದಿದೆ.

- Advertisement -

ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಾಗಸಂದ್ರದ ನಿವಾಸಿ ರಾಜೇಂದ್ರ(50) ಎಂದು ಗುರುತಿಸಲಾಗಿದೆ. ನೆಲಮಂಗಲದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ, ಕೆಲಸದ ನಿಮಿತ್ತ ಬೆಳಿಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಜಿಎಸ್‍ಟಿ ಕಚೇರಿಗೆ ತೆರಳುತ್ತಿದ್ದರು. ಇದೇ ವೇಳೆ ಅವರ ಬಲಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿಯಾದ ಪರಿಣಾಮ ಕೆಳಕ್ಕೆ ಬಿದ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜೇಂದ್ರ ಅವರು ಕೆಳಕ್ಕೆ ಬಿದ್ದ ಕೂಡಲೇ ಅವರ ತಲೆ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಫೆ.13ರಂದು ಮಸಣ ಕಾರ್ಮಿಕರ ಪ್ರತಿಭಟನೆ

ವಿಷಯ ತಿಳಿದು ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದು, ಬಸ್ಸನ್ನು ತಮ್ಮ ಸುಪರ್ದಿಗೆ ಪಡೆದಿರುವುದಾಗಿ ಬೆಂಗಳೂರು ಸಂಚಾರ ಉತ್ತರ ವಿಭಾಗದ ಡಿಸಿಪಿ ಸಿರಿಗೌರಿ ಡಿ ಆರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...