ಬೆಂಗಳೂರು | ಆಗಸ್ಟ್‌ನಲ್ಲಿ ವಾಡಿಕೆಗಿಂತ ಅರ್ಧದಷ್ಟು ಮಳೆ ಕೊರತೆ ಸಾಧ್ಯತೆ; ರೈತರ ಆತಂಕ

Date:

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್ ಮತ್ತು ಜುಲೈನಲ್ಲಿ ಕಡಿಮೆ ಪ್ರಮಾಣದ ಮಳೆಯಾದ ಪರಿಣಾಮ ಬಿತ್ತನೆ ಕುಂಠಿತವಾಗಿತ್ತು. ಇದೀಗ ಆಗಸ್ಟ್‌ನಲ್ಲೂ ವಾಡಿಕೆಗಿಂತ ಅರ್ಧದಷ್ಟು ಮಳೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂಬ ಭಾರತೀಯ ಹವಾಮಾನ ಇಲಾಖೆಯ ವರದಿಯಿಂದ ರೈತರು ಆತಂಕಕ್ಕೀಡಾಗಿದ್ದಾರೆ.

- Advertisement -

ಆಗಸ್ಟ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಇತ್ತೀಚೆಗೆ ವರದಿ ಬಿಡುಗಡೆ ಮಾಡಿದೆ. ಕರ್ನಾಟಕದ ಕರಾವಳಿಯ ಬಹುತೇಕ ಜಿಲ್ಲೆಗಳು, ಮಲೆನಾಡು, ಉತ್ತರ, ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಾತ್ರ ಜೂನ್‌ನಲ್ಲಿ ಮಳೆಯಾಗಿದೆ. ಆದರೆ ಬಯಲು ಸೀಮೆ ಜಿಲ್ಲೆಗಳಲ್ಲಿ ನಿರೀಕ್ಷೆಯಂತೆ ಮಳೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮುಂಗಾರು ಋತುವಿನ ಉಳಿದ ಅವಧಿಯಲ್ಲಿ ಎಲ್‌ನಿನೊ ಬಲಗೊಳ್ಳಲುವ ನಿರೀಕ್ಷಿಯಿದೆ. ಹವಾಮಾನ ಬದಲಾವಣೆಯಿಂದ ಸಮುದ್ರದ ಉಷ್ಣತೆಯು ವೇಗವಾಗಿ ಏರುತ್ತಿದೆ. ಇದರಿಂದ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಮಳೆ ಕೊರತೆಯಾಗಲಿದೆ” ಎಂದು ಖಾಸಗಿ ಹವಾಮಾನ ಮುನ್ಸೂಚಕ ಸಂಸ್ಥೆ ಸ್ಕೈಮೆಟ್‌ನ ವ್ಯವಸ್ಥಾಪಕ ನಿರ್ದೇಶಕ ಜತಿನ್ ಸಿಂಗ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿರುವುದು ಬಿತ್ತನೆಗಾಗಿ ಕಾಯುತ್ತಿರುವ ಹಾಗೂ ಬಿತ್ತನೆ ಮಾಡಿರುವ ಎರಡೂ ವರ್ಗದ ರೈತರ ಕಳವಳಕ್ಕೆ ಕಾರಣವಾಗಿದೆ.

ದಕ್ಷಿಣ ಒಳನಾಡಿನಲ್ಲಿ ಆಗಸ್ಟ್‌ನಲ್ಲಿ ವಾಡಿಕೆಯ 88.2 ಮಿಲಿ ಮೀಟರ್ ಮಳೆಯಾಬೇಕು. ಉತ್ತರ ಒಳನಾಡಿನಲ್ಲಿ 117.7, ಮಲೆನಾಡಿನಲ್ಲಿ 423.2, ಕರಾವಳಿಯಲ್ಲಿ 822.9 ಹಾಗೂ ಒಟ್ಟಾರೆಯಾಗಿ ರಾಜ್ಯದಲ್ಲಿ 220 ಮಿಲಿ ಮೀಟರ್ ಮಳೆಯಾಗಬೇಕಿದೆ. ಆದರೆ ಆಗಸ್ಟ್ ಆರಂಭವಾಗಿ ಆರು ದಿನವಾದರೂ ಕೂಡ ಮಳೆಯ ಯಾವುದೇ ಮುನ್ಸೂಚನೆ ಕಾಣುತ್ತಿಲ್ಲ.

ಮುಂಗಾರು ಋತುವಿನಲ್ಲಿ ಈ ವೇಳೆಗಾಗಲೇ ದಕ್ಷಿಣ ಒಳನಾಡಿನಲ್ಲಿ 151 ಮಿಮೀ ವಾಡಿಕೆಯ ಮಳೆಯಾಗಬೇಕಿತ್ತು. ಆದರೆ ಈವರೆಗೆ ಸುರಿದ ಮಳೆ 138 ಮಿಮೀ. ಹೀಗಾಗಿ ಇಲ್ಲಿ ಶೇಕಡಾ 8 ರಷ್ಟು ಮಳೆ ಕೊರತೆಯಾಗಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ 228 ಮಿಮೀ ವಾಡಿಕೆಯ ಮಳೆಯಾಗಿದ್ದು, ಈವರೆಗೆ 245 ಮಿಮೀ. ಮಳೆ ಸುರಿದಿದ್ದು, ಶೇ.7 ರಷ್ಟು ಹೆಚ್ಚು ಮಳೆಯಾಗಿದೆ.

ಮಲೆನಾಡಿನಲ್ಲಿ ವಾಡಿಕೆಯಂತೆ 993 ಮಿಮೀ ಮಳೆಯಾಗಬೇಕು. ಅದರೆ ಈವರೆಗೆ 725 ಮಿಮೀ ಮಳೆಯಾಗಿದೆ. ಹೀಗಾಗಿ ಈ ಭಾಗದಲ್ಲಿ ಶೇ.27ರಷ್ಟು ಮಳೆ ಕಡಿಮೆಯಾಗಿದೆ. ಕರಾವಳಿಯಲ್ಲಿ 2,046 ಮಿಮೀ ಮಳೆಯಾಗಬೇಕಿತ್ತು. ಆದರೆ 1,909 ಮಿಮೀ ಮಳೆಯಾಗಿದೆ. ಹೀಗಾಗಿ ಇಲ್ಲಿ ಶೇ.7ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ವಾಡಿಕೆಯಂತೆ 489 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ ಈವರೆಗೆ 443 ಮಿಮೀನಷ್ಟು ಮಾತ್ರ ಮಳೆಯಾಗಿದ್ದು, ಮುಂಗಾರು ಮಳೆಯಲ್ಲಿ ಶೇ.9ರಷ್ಟು ಕೊರತೆ ಉಂಟಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯ

ಜುಲೈನಲ್ಲಿ ಉತ್ತರ ಒಳನಾಡಿನ ಬೆಳಗಾವಿ ಸೇರಿದಂತೆ ಕೆಲವೆಡೆ ವಾಡಿಕೆಯಂತೆ ಮಳೆಯಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಚಿತ್ರದುರ್ಗ, ಕಲಬುರಗಿ, ಹಾಸನ, ಸೇರಿದಂತೆ ಬಹುತೇಕ ಕಡೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ.

ಹೊಲವನ್ನು ಉಳುಮೆ ಮಾಡಿ ಬಿತ್ತನೆಗಾಗಿ ಎಲ್ಲ ರೈತರು ಸಿದ್ಧತೆ ಮಾಡಿಕೊಂಡಿದ್ದು, ಜುಲೈ ಕೊನೆಯ ವಾರದಲ್ಲೇ ರಾಗಿ ಬಿತ್ತನೆಗೆ ಕಾದು ಕುಳಿತರೂ ಈವರೆಗೆ ಮಳೆ ಬಾರದ ಹಿನ್ನೆಲೆಯಲ್ಲಿ ಇನ್ನೂ ಬಿತ್ತನೆ ಸಾಧ್ಯವಾಗಿಲ್ಲದಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...