ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳು ಹೊರಡಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ನಟ ಜಗ್ಗೇಶ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ, ಈ ಪ್ರಕರಣದಲ್ಲಿ ಜಗ್ಗೇಶ್ ಸಹ ಸಿಲುಕಿಕೊಂಡಿದ್ದರು. ನಟನ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ಈ ಕ್ರಮವನ್ನು ಪ್ರಶ್ನೀಸಿ ನಟ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದರು.
ನಟ ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.
ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್‌ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.