ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆಯಡಿ ಪರಿಹಾರ ಮೊತ್ತ ಬಿಡುಗಡೆ

Date:

ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

- Advertisement -

ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ಮೊತ್ತದ ಚೆಕ್ ವಿತರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಸಾರಿಗೆ ಸಿಬ್ಬಂದಿಗಳು ಹಗಲು, ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ” ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 3

“ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು‌. ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಕೆಎಸ್‌ಆರ್‌ಟಿಸಿ ನೌಕರ

“ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಯೋಜನೆಯನ್ನೂ ಕೂಡ ಜಾರಿಗೆ ತಂದಿದ್ದು, ರಾಜ್ಯಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದೆ. ಈವರೆಗೂ 56,000ಕ್ಕೂ ಅಧಿಕ ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ” ಎಂದು ತಿಳಿಸಿದರು.

ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗ ಅರಕಲಗೂಡು ಘಟಕದ ಬಿಲ್ಲೆ ಸಂಖ್ಯೆ. 1624, ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ ಡಿ ಅವರಿಗೆ ₹25 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ ಅವರಿಗೆ 2024ರ ಮಾರ್ಚ್‌ 25ರಿಂದ ಡಿಸೆಂಬರ್‌ 09ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ

ಸಂಸ್ಥೆಯಿಂದ ₹4,85,762ರಷ್ಟು ಪೂರ್ಣ ವೈದ್ಯಕೀಯ ವೆಚ್ಚ ಭರಿಸಲಾಗಿದೆ. ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ₹1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈವರೆಗೂ 24 ಮಂದಿ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹1 ಕೋಟಿ ಚೆಕ್ ನೀಡಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ₹26 ಕೋಟಿ ಪರಿಹಾರ ನೀಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 2

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ₹3 ಲಕ್ಷವಿದ್ದ ಪರಿಹಾರದ ಮೊತ್ತವನ್ನು 2023ರ ನವೆಂಬರ್‌ 01ರಿಂದ ₹10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈವರೆಗೂ 94 ಪ್ರಕರಣಗಳಲ್ಲಿ ತಲಾ ₹10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ಇಂದು ತಲಾ ₹10 ಲಕ್ಷಗಳ ಪರಿಹಾರದ ಚೆಕ್ ವಿತರಿಸಲಾಗಿದೆ. ಈವರೆಗೂ 125 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು ₹12.50 ಕೋಟಿ ಪರಿಹಾರ ನೀಡಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ₹25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 1

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ನೇತೃತ್ವದಲ್ಲಿ, ಅಪಘಾತದಲ್ಲಿ‌ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ಇಂದು ತಲಾ ₹1 ಕೋಟಿಯಂತೆ ಇಬ್ಬರಿಗೆ ₹2 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ(31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹10 ಲಕ್ಷದಂತೆ) ₹3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 4

ಕರಾರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ವಿ ಮಾತನಾಡಿ, “ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಹಾರದ ಹಣವನ್ನು ಸದುಪಯೋಗಪಡಿಸಿಕೊಳ್ಳಿ ಯಾರನ್ನೂ ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ. ಕರಾರಸಾ ನಿಗಮ ಸಚಿವರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮಾರ್ಗದರ್ಶನದಂತೆ, ನಿಗಮದಲ್ಲಿ ಹತ್ತು- ಹಲವು ಕಾರ್ಮಿಕ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನರೇಗಾ ಯೋಜನೆಯ ಸಮರ್ಪಕ ಜಾರಿಗೆ ಕೆಪಿಆರ್‌ಎಸ್‌ ಆಗ್ರಹ

ವ್ಯವಸ್ಥಾಪಕ ನಿರ್ದೇಶಕ ಆರ್ ರಾಮಚಂದ್ರನ್, ಬಿಎಂಟಿಸಿ ನಿರ್ದೇಶಕಿ ಡಾ. ನಂದಿನಿದೇವಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...