ಬೆಂಗಳೂರು ವಿವಿಯಿಂದ ಸಂಗೀತ ನಿರ್ದೇಶಕ ಗುರುಕಿರಣ್‌, ಸಮಾಜ ಸೇವಕ ರಾಜಣ್ಣಗೆ ಗೌರವ ಡಾಕ್ಟರೇಟ್

Date:

Advertisements

ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಗಣ್ಯರಿಗೂ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸುವ ಸಂದರ್ಭದಲ್ಲಿ ಗುರುಕಿರಣ್ ಕುಟುಂಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.

Advertisements
ಗುರುಕಿರಣ್ 1

59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.

59ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.

ವಿವಿ 1

ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷರಾದ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವದ ಭಾಷಣ ಮಾಡಿದರು.

ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಸೇರಿದಂತೆ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X