ಬೆಂಗಳೂರು | ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ

Date:

ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ ಆರಂಭವಾಗಿದೆ. ಬೈಕ್‌ಗಳಲ್ಲಿ ವ್ಹೀಲಿಂಗ್ ಮಾಡುತ್ತಾ, ರಸ್ತೆಯುದ್ದಕ್ಕೂ ಪುಂಡಾಟ ಮೆರೆಯುತ್ತಿದ್ದಾರೆ. ಇದೀಗ, ಡಿಸಿಪಿ ಕಚೇರಿ ಸಮೀಪದಲ್ಲೇ ಪುಂಡರು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯ ಸೌತ್ ಎಂಡ್ ಸರ್ಕಲ್ ಬಳಿ ರಾತ್ರಿ 11ಗಂಟೆ ಸುಮಾರಿಗೆ ಮೂರು ನಾಲ್ಕು ಡಿಯೋ ಬೈಕ್​ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಬಾರದು ಎಂದು ನಂಬರ್ ಪ್ಲೇಟ್ ಇಲ್ಲದ ಬೈಕ್​ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪ: ದೂರು ದಾಖಲು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಜಾಗರೂಕತೆ ಚಾಲನೆ, ವ್ಹೀಲಿಂಗ್ ಮಾಡಿ ಬೇರೆ ಸವಾರರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಅಲ್ಲದೇ ಪುಂಡರು ಇತರ ವಾಹನ ಸವಾರರಿಗೂ ರಸ್ತೆ ಬಿಡದೇ ತೊಂದರೆಯುಂಟು ಮಾಡಿದ್ದಾರೆ. ಸದ್ಯ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ಯುವಕರ ಪುಂಡಾಟ ಸೆರೆಯಾಗಿದೆ.

ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...