ಬೆಂಗಳೂರು | ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಚಾಕು ಇರಿತ; ಆರೋಪಿಗಳ ಪತ್ತೆಗೆ ಶೋಧ

Date:

Advertisements

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರು ಪಟ್ಟಣದ ಕಮಲಾನಗರದಲ್ಲಿ ನಡೆದಿದೆ.

ಬಸವೇಶ್ವರ ನಗರ ನಿವಾಸಿ ಚಿರಂಜೀವಿ(32) ಚಾಕು ಇರಿತಕ್ಕೆ ಒಳಗಾದವರು. ಚಿರಂಜೀವಿ ತನ್ನ ಸ್ನೇಹಿತನ ಜತೆ ಬೈಕಿನಲ್ಲಿ ಅತ್ತೆಯ ಮನೆಗೆ ತೆರಳಿದ್ದರು. ಈ ವೇಳೆ ಬೈಕ್ ಇಳಿದು ಮನೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಕಮಲಾನಗರದ ಕೆರೆ ಅಂಗಳದ ವೀರಭದ್ರೇಶ್ವರ ಚಿತ್ರಮಂದಿರದ ಬಳಿ ಬೈಕ್‌ನಲ್ಲಿ ಬಂದಿದ್ದ ಅಪರಿಚಿತರು, ಇವರಿಗೆ ಡಿಕ್ಕಿ ಹೊಡೆಯುವಂತೆ ವೇಗವಾಗಿ ಹೋಗಿದ್ದರು. ಇದನ್ನು ಕಂಡ ಚಿರಂಜೀವಿ ಅವರು ನಿಧಾನವಾಗಿ ನೋಡಿಕೊಂಡು ಬೈಕ್‌ ಚಾಲನೆ ಮಾಡುವಂತೆ ಹೇಳಿದ್ದರು. ಅಷ್ಟಕ್ಕೇ ಕೋಪಗೊಂಡ ಆರೋಪಿಗಳು, ‘ನಮ್ಮೆದುರೇ ಎಗರಾಡುತ್ತೀಯಾ’ ಎಂದು ಅವರ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅತ್ಯಾಚಾರ ಎಸಗಿ, ನಗ್ನ ಫೋಟೊ ವಿಡಿಯೊ ಚಿತ್ರೀಕರಿಸಿದ್ದ ಬ್ಯಾಡ್ಮಿಂಟನ್ ತರಬೇತುದಾರ ಬಂಧನ

Advertisements

“ಹಲ್ಲೆಯಿಂದ ಗಾಯಗೊಂಡಿದ್ದ ಚಿರಂಜೀವಿಯವರು ಕುಸಿದು ಬಿದ್ದಿದ್ದರು. ಚಿರಂಜೀವಿಯವರ ಸಹೋದರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅವರು ಬಸವೇಶ್ವರ ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ” ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ರೌಡಿಶೀಟರ್‌ವೊಬ್ಬ ಇತ್ತೀಚೆಗೆ ಸುಖಾಸುಮ್ಮನೆ ಫೆಬ್ರವರಿ 8ರ ಒಂದೇ ದಿನ ರಾತ್ರಿ ಐವರು ನಾಗರಿಕರಿಗೆ ಪ್ರತ್ಯೇಕ ಸ್ಥಳಗಳಲ್ಲಿ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದ್ದ ಘಟನೆ ಇಂದಿರಾನಗರದಲ್ಲಿ ನಡೆದಿತ್ತು. ಯುವಜನರನ್ನು ಮಾತನಾಡಿಸುವುದು ಅಥವಾ ಬುದ್ಧಿ ಹೇಳುವುದೇ ತಪ್ಪು, ಬುದ್ದಿ ಹೇಳುವವರ ಅಂತ್ಯಕ್ಕೆ ಕಾರಣವಾಗಬಹುದೇ ಎಂಬ ಆತಂಕಕ್ಕೆ ಒಳಗಾಗುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X