ಬೆಂಗಳೂರು | ಇ-ಸ್ವತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ(ಪಂ.ರಾಜ್)ರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

“ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ” ಎಂದರು.

“ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006ರ ನಿಯಮ 28 ಮತ್ತು 30ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳ ಸದಸಸ್ಯರನ್ನು ಒಳಗೊಂಡ ಈ ಸಮಿತಿಯನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಕಾರ್ಯನಿರ್ವಹಣಾ ಸಮಿತಿಯು ಎರಡು ತಿಂಗಳೊಳಗೆ ವಿವರವಾದ ವರದಿಯೊಂದಿಗೆ ಇ-ಸ್ವತ್ತು ಸಲಹಾ ಸಮಿತಿಗೆ ಶಿಫಾರಸು ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ. ಅರುಂಧತಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X