ವಾರದ ಹಿಂದಷ್ಟೇ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾದ ಪ್ರಕರಣ ಸಂಬಂಧ, ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪಂದ್ಯದ ವೇಳೆ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಗಾಗಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪೆನಿಯೊಂದಕ್ಕೆ ವಹಿಸಿತ್ತು.
ಈ ಸುದ್ದಿ ಓದಿದ್ದೀರಾ? ಗದಗ | ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ; ನ. 3ರಂದು ಬೃಹತ್ ಕಾರ್ಯಕ್ರಮ
ಮಧ್ಯಾಹ್ನ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳ ವಾಟ್ಸಪ್ ಗ್ರೂಪ್‍ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಶುಚಿತ್ವ ಕಾಪಾಡದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.