ಬೆಂಗಳೂರು | ಕಾರು ಮುಳುಗಿ ಯುವತಿ ಸಾವು ಪ್ರಕರಣ: ಅಂಡರ್‌ಪಾಸ್‌ಗೆ ಲೋಕಾಯುಕ್ತರ ಭೇಟಿ

Date:

ಬೆಂಗಳೂರು ನಗರದಲ್ಲಿ ಮೇ 21ರಂದು ಭಾರೀ ಮಳೆ ಸುರಿದ ಸಂದರ್ಭದಲ್ಲಿ ಕಾರು ಮುಳುಗಿ ಭಾನುರೇಖಾ ಎಂಬ ಯುವತಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುರ್ಘಟನೆಗೆ ಕಾರಣವಾದ ಕೆ ಆರ್‌ ವೃತ್ತದ ಅಂಡರ್‌‍ಪಾಸ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ, ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಆದೇಶಿಸಿದ್ದರು. ಲೋಕಾಯುಕ್ತದ ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್‌ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ಬುಧವಾರ ಕೆ ಆರ್‌ ವೃತ್ತದ ಅಂಡರ್‌ಪಾಸ್‌ಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿತು.

ಲೋಕಾಯುಕ್ತದ ತಾಂತ್ರಿಕ ವಿಭಾಗದ ಎಂಜಿನಿಯರ್‌ಗಳೊಂದಿಗೆ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮಳೆನೀರು ಕಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರಿಂದ ವಿವರಣೆ ಪಡೆಯಲಾಯಿತು. ಟ್ಯಾಂಕರ್‌ನಲ್ಲಿ ನೀರು ತರಿಸಿ ಅಂಡರ್‌ಪಾಸ್‌ನ ಕಾಲುವೆಯಲ್ಲಿ ಹರಿಸಿ, ಪರೀಕ್ಷಿಸಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದುರ್ಘಟನೆ ಸಂಭವಿಸಿದ ದಿನ ಅಂಡರ್‌ಪಾಸ್‌ನಲ್ಲಿ ಬೃಹತ್‌ ಪ್ರಮಾಣದ ನೀರು ಸಂಗ್ರಹ ಆಗಲು ಕಾರಣ, ಮಳೆನೀರು ಅಂಡರ್‌ಪಾಸ್‌ನಲ್ಲಿ ನಿಲ್ಲದಂತೆ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಕೆ ಆರ್‌ ವೃತ್ತದ ಅಂಡರ್‌ಪಾಸ್‌ ಮಾತ್ರವಲ್ಲ ನಗರದ ಯಾವುದೇ ಅಂಡರ್‌ಪಾಸ್‌ನಲ್ಲೂ ಸರಿಯಾದ ನಿರ್ವಹಣೆ ಇಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಅಂಡರ್‌ಪಾಸ್‌ಗಳಲ್ಲಿ ಮಳೆನೀರು ನಿಲ್ಲುವುದನ್ನು ತಡೆಯಲು ಕಾಲುವೆಗಳಲ್ಲಿ ಹೂಳು ತೆಗೆಯಬೇಕಿತ್ತು. ಅಂಡರ್‌ಪಾಸ್‌ ಮತ್ತು ಅವುಗಳಿಗೆ ಹೊಂದಿಕೊಂಡ ಕಾಲುವೆಗಳಲ್ಲಿ ಹೂಳು ತೆಗೆದಿಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿದೆ. ಮಳೆಗಾಲಕ್ಕೂ ಮೊದಲು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಪರಿಶೀಲನೆ ವೇಳೆ ಗೊತ್ತಾಗಿದೆ.

“ಕೆ ಆರ್‌ ವೃತ್ತದ ಅಂಡರ್‌ಪಾಸ್‌ನಲ್ಲಿ ದುರ್ಘಟನೆ ಸಂಭವಿಸಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅದರ ಜತೆಯಲ್ಲೇ ಇತರ ಅಂಡರ್‌ಪಾಸ್‌ಗಳ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಕರ್ತವ್ಯಲೋಪದ ಕುರಿತು ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು” ಎಂದು ತನಿಖಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...