ಬೆಂಗಳೂರು | ಕಾರು ಮುಳುಗಿ ಯುವತಿ ಸಾವು ಪ್ರಕರಣ: ಅಂಡರ್‌ಪಾಸ್‌ಗೆ ಲೋಕಾಯುಕ್ತರ ಭೇಟಿ

Date:

ಬೆಂಗಳೂರು ನಗರದಲ್ಲಿ ಮೇ 21ರಂದು ಭಾರೀ ಮಳೆ ಸುರಿದ ಸಂದರ್ಭದಲ್ಲಿ ಕಾರು ಮುಳುಗಿ ಭಾನುರೇಖಾ ಎಂಬ ಯುವತಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುರ್ಘಟನೆಗೆ ಕಾರಣವಾದ ಕೆ ಆರ್‌ ವೃತ್ತದ ಅಂಡರ್‌‍ಪಾಸ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ, ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಆದೇಶಿಸಿದ್ದರು. ಲೋಕಾಯುಕ್ತದ ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್‌ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ಬುಧವಾರ ಕೆ ಆರ್‌ ವೃತ್ತದ ಅಂಡರ್‌ಪಾಸ್‌ಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಲೋಕಾಯುಕ್ತದ ತಾಂತ್ರಿಕ ವಿಭಾಗದ ಎಂಜಿನಿಯರ್‌ಗಳೊಂದಿಗೆ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮಳೆನೀರು ಕಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರಿಂದ ವಿವರಣೆ ಪಡೆಯಲಾಯಿತು. ಟ್ಯಾಂಕರ್‌ನಲ್ಲಿ ನೀರು ತರಿಸಿ ಅಂಡರ್‌ಪಾಸ್‌ನ ಕಾಲುವೆಯಲ್ಲಿ ಹರಿಸಿ, ಪರೀಕ್ಷಿಸಲಾಯಿತು.

ದುರ್ಘಟನೆ ಸಂಭವಿಸಿದ ದಿನ ಅಂಡರ್‌ಪಾಸ್‌ನಲ್ಲಿ ಬೃಹತ್‌ ಪ್ರಮಾಣದ ನೀರು ಸಂಗ್ರಹ ಆಗಲು ಕಾರಣ, ಮಳೆನೀರು ಅಂಡರ್‌ಪಾಸ್‌ನಲ್ಲಿ ನಿಲ್ಲದಂತೆ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಕೆ ಆರ್‌ ವೃತ್ತದ ಅಂಡರ್‌ಪಾಸ್‌ ಮಾತ್ರವಲ್ಲ ನಗರದ ಯಾವುದೇ ಅಂಡರ್‌ಪಾಸ್‌ನಲ್ಲೂ ಸರಿಯಾದ ನಿರ್ವಹಣೆ ಇಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಅಂಡರ್‌ಪಾಸ್‌ಗಳಲ್ಲಿ ಮಳೆನೀರು ನಿಲ್ಲುವುದನ್ನು ತಡೆಯಲು ಕಾಲುವೆಗಳಲ್ಲಿ ಹೂಳು ತೆಗೆಯಬೇಕಿತ್ತು. ಅಂಡರ್‌ಪಾಸ್‌ ಮತ್ತು ಅವುಗಳಿಗೆ ಹೊಂದಿಕೊಂಡ ಕಾಲುವೆಗಳಲ್ಲಿ ಹೂಳು ತೆಗೆದಿಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿದೆ. ಮಳೆಗಾಲಕ್ಕೂ ಮೊದಲು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಪರಿಶೀಲನೆ ವೇಳೆ ಗೊತ್ತಾಗಿದೆ.

“ಕೆ ಆರ್‌ ವೃತ್ತದ ಅಂಡರ್‌ಪಾಸ್‌ನಲ್ಲಿ ದುರ್ಘಟನೆ ಸಂಭವಿಸಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅದರ ಜತೆಯಲ್ಲೇ ಇತರ ಅಂಡರ್‌ಪಾಸ್‌ಗಳ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಕರ್ತವ್ಯಲೋಪದ ಕುರಿತು ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು” ಎಂದು ತನಿಖಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ...

ಹೃದಯದ ಮೇಲಿದ್ದ ಬೃಹತ್ ಗಡ್ಡೆ ಯಶಸ್ವಿ ತೆರವು; ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ವೈದ್ಯರ ಅಪರೂಪದ ಸಾಧನೆ

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದ್ದ ಬೃಹತ್...