ನೈರುತ್ಯ ರೈಲ್ವೆ ಆದಾಯದಲ್ಲಿ 10% ಹೆಚ್ಚಳ

Date:

Advertisements

“ನೈರುತ್ಯ ರೈಲ್ವೆ ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆಯನ್ನು ದಾಖಲಿಸಿದೆ. 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ.10.44ರಷ್ಟು ಹೆಚ್ಚಳದೊಂದಿಗೆ ಬರೋಬ್ಬರಿ ₹4288.27 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಅವಧಿಯಲ್ಲಿ 3882.93 ಕೋಟಿ ರೂ. ಸಂಗ್ರಹವಾಗಿತ್ತು” ಎಂದು ರೈಲ್ವೆ ಇಲಾಖೆ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ ಇಲಾಖೆ, “ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ₹1801.68 ಕೋಟಿ ಇದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.15.20ರಷ್ಟು ಹೆಚ್ಚಾಗಿದೆ” ಎಂದು ಮಾಹಿತಿ ನೀಡಿದೆ.

“ನೈರುತ್ಯ ರೈಲ್ವೆಯು 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ 27.49 ಮೆಟ್ರಿಕ್ ಟನ್ ಸರಕುಗಳನ್ನು ಲೋಡ್ ಮಾಡುವ ಮೂಲಕ ಶೇ.11.66ರಷ್ಟು ಹೆಚ್ಚಳದೊಂದಿಗೆ 2741.40 ಕೋಟಿ ಮೂಲ ಸರಕು ಆದಾಯವನ್ನು ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ₹2,455.14 ಕೋಟಿ ಗಳಿಸಿತ್ತು” ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಬೊಮ್ಮಾಯಿ ಸಂಬಂಧಿಯಿಂದ ಕಿದ್ವಾಯಿ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ

“ವಿಭಾಗಗಳ ಬ್ಯುಸಿನೆಸ್ ಡೆವಲ್‌ಪ್‌ಮೆಂಟ್‌ ಯೂನಿಟ್ಸ್‌ಗಳ ಅವಿರತ ಪ್ರಯತ್ನ ಸಮರ್ಪಕವಾದ ಅಸೆಟ್ಸ್ ಮ್ಯಾನೇಜ್ಮೆಂಟ್ ವ್ಯವಸ್ಥೆಯ ಮೂಲಕ ಸಮಯೋಚಿತ ವ್ಯಾಗನ ಪೂರೈಕೆ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ಸಿಬ್ಬಂದಿಯ ಅಪಾರ ಪ್ರಯತ್ನದ ಫಲವಾಗಿ ಸರಕು ಸಾಗಣೆಯಲ್ಲಿ ಬೆಳವಣಿಗೆ ಗಣಿನೀಯ ಪ್ರಗತಿ ಸಾಧ್ಯವಾಗಿದೆ. ನೈರುತ್ಯ ರೈಲ್ವೆ ಮಾರ್ಗಗಳ ದ್ವಿಪಥಿಕರಣ ಹಾಗೂ ವಿದ್ಯುದ್ದೀಕರಣವು ಸರಕು ರೈಲುಗಳ ಸಾಗಣೆ ಸಮಯವನ್ನು ಕಡಿಮೆ ಮಾಡಲು, ರೈಲುಗಳ ವರ್ಧಿತ ಚಲನಶೀಲತೆ ಮತ್ತು ವಿಶ್ವಾಸಾರ್ಹತೆಗೆ ಕಾರಣವಾಗಿದೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X