ಬೀದರ್‌ | ಕರವೇ ಕಾರ್ಯಕರ್ತರ ಬಿಡುಗಡೆಗೆ ಆಗ್ರಹ

Date:

Advertisements

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಮತ್ತು ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾ ಕರವೇ ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್‌ ನಲ್ಲಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್‌ ಮಾತನಾಡಿ, “ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಕಳೆದ ಮೂರು ತಿಂಗಳಿಂದ ಸತತವಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಅಂಗಡಿ ಮುಂಗಟ್ಟು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60% ರಷ್ಟು ಕನ್ನಡ ಬಳಸುವಂತೆ ಡಿಸೆಂಬರ್ 27 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ನಡೆಸಿದರು. ಈ ವೇಳೆ ರಾಜ್ಯಾಧ್ಯಕ್ಷ ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಜೈಲಿಗೆ ಕಳಿಸಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರವೇ ಕಳೆದ 25 ವರ್ಷಗಳಿಂದ ನಾಡು, ನುಡಿ, ಜಲ, ಸಂಸ್ಕೃತಿ, ಪರಂಪರೆಗಳಿಗೆ ಧಕ್ಕೆ ಬಂದಾಗ ನಾಡಿನಾದ್ಯಂತ ತನ್ನದೇ ತತ್ವ ಸಿದ್ಧಾಂತಗಳ ಮೂಲಕ ಪ್ರತಿಭಟಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಿದೆ. ಇದೀಗ ಕನ್ನಡಕ್ಕಾಗಿ ಪ್ರತಿಭಟನೆ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆಗೊಳಿಸಲು ವಿಶೇಷ ಕಾಳಜಿವಹಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕೆಂದು ಕರವೇ ಮುಖಂಡರು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಜ.7ರಂದು ಬಸವಕಲ್ಯಾಣದಲ್ಲಿ ಬೃಹತ್ ಸಮಾನತಾ ಸಮಾವೇಶ

ಈ ಸಂದರ್ಭದಲ್ಲಿ ಕರವೇ ಬೀದರ್ ತಾಲೂಕಾ ಯುವ ಘಟಕ ಅಧ್ಯಕ್ಷ ವಿನಾಯಕರೆಡ್ಡಿ ಬುಧೇರಾ, ಔರಾದ ತಾಲೂಕಾಧ್ಯಕ್ಷ ಅನೀಲ ಬೇಲೂರೆ ಸೇರಿದಂತೆ ಪ್ರಮುಖರಾದ ಉದಯಕುಮಾರ ಅಷ್ಟೂರೆ, ಸತೀಶ ಫುಲಾರಿ, ಮಹೇಶ ಸ್ವಾಮಿ, ಸೋಮಶೇಖರ್ ಸಜ್ಜನ, ವಿವೇಕ ನಿರ್ಮಳೆ, ದತ್ತಾತ್ರಿ ಅಲ್ಲಮಕೇರೆ, ನವೀನ ಬುಧೇರಾ, ಅಮಿತ ಶಿವಪೂಜೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X