ಬಂಗಾರಪೇಟೆ | ತಹಶೀಲ್ದಾರ್‌ ವರ್ಗಾವಣೆಗೆ ಕೆಎಸ್ಎಟಿ ತಡೆಯಾಜ್ಞೆ; ಸೀಟಿಗಾಗಿ ತಹಶೀಲ್ದಾರ್‌ಗಳಿಬ್ಬರ ಜಟಾಪಟಿ

Date:

Advertisements

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ.

ವರ್ಗಾವಣೆಯಾಗಿದ್ದ ತಹಶೀಲ್ದಾರ್‌ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ ಅಧಿಕಾರವಹಿಸಿಕೊಂಡಿದ್ದ ತಹಶೀಲ್ದಾರ್‌ ಸುಜಾತ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಇಬ್ಬರ ನಡುವಿನ ವಾಗ್ವಾದ ನಡೆಯಿತು.

ಆಡಳಿತರೂಡ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ತಹಶೀಲ್ದಾರ್ ವೆಂಕಟೇಶಪ್ಪ 5 ತಿಂಗಳಲ್ಲೇ ವರ್ಗಾವಣೆಯಾಗಿದ್ದರು.

Advertisements

ಶಾಸಕ ಎಸ್. ಎನ್ ನಾರಾಯಣಸ್ವಾಮಿ ಮತ್ತು ತಹಶೀಲ್ದಾರ್ ವೆಂಕಟೇಶಪ್ಪನವರ ನಡುವೆ ಹೊಂದಾಣಿಕೆ ಇರಲಿಲ್ಲ. ಇದರಿಂದಾಗಿ ಶಾಸಕರು ವೆಂಕಟೇಶಪ್ಪನವರ ವಿರುದ್ದ ಅಸಮದಾನವನ್ನು ಹೊರಹಾಕಿದ್ದರು. ಅವರ ಕಾರ್ಯವೈಖರಿ ಸರಿಯಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಡಿಸೆಂಬರ್ 31 ರಂದು ವರ್ಗಾವಣೆ ಮಾಡಿಸಲಾಗಿತ್ತು. ಅವರ ಸ್ಥಾನಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮುಜರಾಯಿ ತಹಶೀಲ್ದಾರ್ ಆಗಿದ್ದ ಸುಜಾತ ಅವರನ್ನು ವರ್ಗಾವಣೆ ಮಾಡಿ ನೇಮಕ ಮಾಡಲಾಗಿತ್ತು. ಅದರಂತೆ ಸುಜಾತ ಅವರು ಬಂಗಾರಪೇಟೆಯಲ್ಲಿ ಅಧಿಕಾರವಹಿಸಿಕೊಂಡು ಕರ್ತವ್ಯನಿರ್ವಹಿಸುತ್ತಿದ್ದರು.

ಇದರ ನಡುವೆ ಕಾನೂನು ಸಮರಕ್ಕೆ ಮುಂದಾಗಿದ್ದ ವೆಂಕಟೇಶಪ್ಪ, ʼಸಕಾರಣವಿಲ್ಲದೆ ನನ್ನನ್ನು ಅವಧಿಗೆ ಮುನ್ನ ವರ್ಗಾವಣೆ ಮಾಡಲಾಗಿದೆ. ಗೆಜೆಟೆಡ್ ಎ ಮತ್ತು ಗ್ರೂಪ್ ಬಿ ಅಧಿಕಾರಿಗಳು ವರ್ಗಾವಣೆಯ ನಂತರ ಒಂದು ಸ್ಥಾನದಲ್ಲಿ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಶಿಫಾರಸ್ಸು ಮಾಡಿದೆ. ಈ ಬಗ್ಗೆ ಕರ್ನಾಟಕ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಸಹ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ತಮ್ಮನ್ನು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ, ಬಂಗಾರಪೇಟೆಯಲ್ಲಿ ಕರ್ತವ್ಯ ಮುಂದುವರಿಸಿʼ ಎಂದು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಅಂಗೀಕರಿಸಿದ ಕೆಎಸ್‌ಎಟಿ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಕರ್ತವ್ಯ ಮುಂದುವರೆಸುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

ತಹಶೀಲ್ದಾರ್ ವೆಂಕಟೇಶಪ್ಪರಿಗೆ ಜನವರಿ 3 ರಂದು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿದೆ. ವೆಂಕಟೇಶಪ್ಪ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಆದೇಶದ ಪ್ರತಿಯೊಂದಿಗೆ ಆಗಮಿಸಿ ಅಧಿಕಾರವಹಿಸಿಕೊಂಡರು.

ಆದರೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್ ಸುಜಾತ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವೆಂಕಟೇಶಪ್ಪನವರು ಅಧಿಕಾರವಹಿಸಿಕೊಳ್ಳಲು ಸಕ್ಷಮ ಪ್ರಾದಿಕಾರದಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ತಹಶೀಲ್ದಾರ್ ಸುಜಾತ ಪೋಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಸುಜಾತ, ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಮೂಮೆಂಟ್ ಆದೇಶವನ್ನು ನೀಡಿದ್ದಾರೆ. ಅದರಂತೆ ಡಿ.31 ರಂದು ತಹಶೀಲ್ದಾರ್ ಆಗಿ ಅಧಿಕಾರವಹಿಸಿಕೊಂಡಿದ್ಧೇನೆ. ಹಿಂದಿನ ತಹಶೀಲ್ದಾರ್ ಕರ್ನಾಟಕ ರಾಜ್ಯ ಅಡಳಿತ ನ್ಯಾಯಮಂಡಳಿಯಿಂದ ತಡೆಯಾಜ್ಞೆ ಪಡೆದಿರುವ ಆದೇಶದ ಪ್ರತಿ ನನಗೆ ದೊರೆತಿಲ್ಲ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಾನು ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೋಲಾರ | ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯ

ಅವಧಿ ಪೂರ್ವ ವರ್ಗಾವಣೆಯಿಂದ ವೈಯುಕ್ತಿಕವಾಗಿ ಅನ್ಯಾಯವಾಗಿತ್ತು. ವರ್ಗಾವಣೆ ಆದೇಶದ ವಿರುದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿದ್ದೆ, ಸರ್ಕಾರದ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಆಡಳಿತ ನ್ಯಾಯಮಂಡಳಿ ಆದೇಶದಂತೆ ಕಛೇರಿಗೆ ಆಗಮಿಸಿ ವರದಿ ಮಾಡಿಕೊಂಡಿದ್ದೇನೆ ಎಂದು ತಹಶೀಲ್ದಾರ್ ವೆಂಕಟೇಶಪ್ಪ ತಿಳಿಸಿದ್ದಾರೆ.

ದುರಾಡಳಿತ, ಲಂಚದ ಆರೋಪದಲ್ಲಿ ವರ್ಗಾವಣೆ :

ದುರಾಡಳಿತ, ಲಂಚಗುಳಿತನ, ಜನಸಾಮಾನ್ಯರಿಗೆ ನೀಡುತ್ತಿದ್ದ ಕಿರುಕುಳ ಕುರಿತು ಸಾರ್ವಜನರಿಕರ ದೂರಿನ ಮೇರೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆ ಸ್ಥಳಕ್ಕೆ ಸುಜಾತ ಅವರನ್ನು ನೇಮಕ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೆ ಸುಜಾತ ಅವರೇ ಮುಂದುವರೆಯುತ್ತಾರೆ. ತಹಶೀಲ್ದಾರ್ ವೆಂಕಟೇಶಪ್ಪ ಈ ಹಿಂದೆ ಪೋಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪೋಲೀಸ್ ಬುದ್ದಿಯನ್ನು ತೋರಿಸುತ್ತಿದ್ದಾರೆ. ತಾಲ್ಲೂಕಿನಲ್ಲಿ ಇದ್ಯಾವುದು ನಡೆಯುವುದಿಲ್ಲ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X