ಬೆಂಗಳೂರು | ಪರಿಸರ ಜಾಗೃತಿ: ಮಂದಿರ, ‌ಮಸೀದಿ, ಚರ್ಚ್, ಪೊಲೀಸ್ ಠಾಣೆಗೆ ತೆರಳಿ ಸಸಿ ನೆಟ್ಟ ಸಿಐಒ ಚಿಣ್ಣರು

Date:

“ಮಣ್ಣಲ್ಲಿ ಕೈಗಳು-ಮನಸ್ಸಲ್ಲಿ ಭಾರತ” ಧ್ಯೇಯ ವಾಕ್ಯದೊಂದಿಗೆ ದೇಶಾದ್ಯಂತ 10 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿರುವ ಅಭಿಯಾನದ ಅಂಗವಾಗಿ ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಸೇಶನ್ (ಸಿಐಒ) ಜಯನಗರ ಘಟಕದ ವತಿಯಿಂದ ಮಕ್ಕಳು ತಿಲಕನಗರ ವ್ಯಾಪ್ತಿಯಲ್ಲಿ ಶಾಲೆ, ದೇವಸ್ಥಾನ, ಚರ್ಚ್, ಮಸೀದಿ, ಪೊಲೀಸ್ ಠಾಣೆ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು.

- Advertisement -

ತಿಲಕ್ ನಗರ್ ಪೊಲೀಸ್ ಠಾಣೆಗೆ ಭೇಟಿ ಕೊಟ್ಟ ಸಿಐಒ ಮಕ್ಕಳ ತಂಡ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ವಿಶ್ವನಾಥ್, ಎಎಸ್ಐ ಸದ್ದಾಂ ಹುಸೇನ್, ಇತರ ಅಧಿಕಾರಿಗಳನ್ನು ಭೇಟಿ ಮಾಡಿ‌ ಸಸಿಗಳನ್ನು ಕೊಟ್ಟು ಪರಿಸರ ಉಳಿಸುವ ಸಂದೇಶ ನೀಡಿದರು. ಮಕ್ಕಳ ಪರಿಸರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪೊಲೀಸ್ ಅಧಿಕಾರಿಗಳು ಮಕ್ಕಳಿಗೆ ಸಿಹಿ ನೀಡಿ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001327627

ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಮಕ್ಕಳು ದೇವಸ್ಥಾನದ ಬಿ. ಪಳಿನಿ, ವೈ. ರಾಧಾಕೃಷ್ಣ ಅವರನ್ನು ಭೇಟಿ ಮಾಡಿ ಸಸಿಗಳನ್ನು ವಿತರಿಸಿದರು.

ಈಟನ್ ಮೆಮೋರಿಯಲ್ ಚರ್ಚ್‌ಗೆ ತೆರಳಿ ಚರ್ಚ್‌ನ ಫಾದರ್ ಅವರಿಗೆ ಸಸಿಗಳನ್ನು ನೀಡಲಾಯಿತು. ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ಸಿಸ್ಟರ್ ರೆನ್ನಿ‌ ಡಿಸೋಜಾ, ಶಿಕ್ಷಕಿ ವಿಮಲಾ ಅವರನ್ನು ಭೇಟಿ ಮಾಡಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

1001327626

ರೇನ್ ಟ್ರೀ ಶಾಲೆಯಲ್ಲಿ ಶಿಕ್ಷಕಿಯರಾದ ನಾಜಿಯಾ, ಸುಹಾಸಿನಿ, ಅಂಜುಮ್ ಅವರನ್ನು ಭೇಟಿ ನೀಡಿ ಸಸಿಗಳನ್ನು ನೀಡಲಾಯಿತು. ಇದೇ ವೇಳೆ ಹುಸ್ನಾ ಮಸೀದಿಯ ಮೌಲ್ವಿ ಅಬ್ದುಲ್ ರಹೀಮ್ ಸಂಜಾರ್ ಅವರನ್ನು ಭೇಟಿ ಮಾಡಿದ ಮಕ್ಕಳು ಸಸಿಗಳನ್ನು ನೀಡಿ ಪರಿಸರ ಉಳಿಸುವ ಸಂದೇಶ ನೀಡಿದರು.

ಈ ವೇಳೆ ಸಿಐಒ ಮಾರ್ಗದರ್ಶಕಿ ಇಶ್ರತುನ್ನಿಸಾ, ಜೆಐಎಚ್ ಮಹಿಳಾ ಘಟಕದ ಸಂಚಾಲಕಿ ಮುಸದ್ದಿಖಾ ಸೇರಿದಂತೆ ಹೊಣೆಗಾರರು, ಮಕ್ಕಳ ಪೋಷಕರು ಇದ್ದರು.

1001327621 1
1001327622
1001327628
1001327629
1001327625
1001327621
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...