ಬೀದರ್ | ಭಜನೆ ಗಾಯಕ ಗೋವಿಂದ ಚವ್ಹಾಣಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Date:

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ಭಜನೆ’ ಕ್ಷೇತ್ರದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಖೆರ್ಡಾ(ಬಿ) ಶಂಕ್ರು ತಾಂಡಾ ನಿವಾಸಿ ಗೋವಿಂದ ಚವ್ಹಾಣ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ಹಿರಿಯ ಭಜನೆ ಗಾಯಕರಾದ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಚಿಕ್ಕಂದಿಂದಲೇ ಬಂಜಾರ ಭಜನೆ, ಜಾನಪದ ಕಲೆ ಮೈಗೂಡಿಸಿಕೊಂಡು ವಿವಿಧ ಕಾರ್ಯಕ್ರಮ, ಉತ್ಸವಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ದೂರದರ್ಶನ, ಆಕಾಶವಾಣಿ ಸೇರಿದಂತೆ ವಿವಿಧೆಡೆ ಭಜನಾ ಕಲಾ ತಂಡದೊಂದಿಗೆ ಭಾಗವಹಿಸಿ ಕಲೆ ಪ್ರದರ್ಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದೀಗ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಈ ಕುರಿತು ಗೋವಿಂದ ಅವರು ಈದಿನ.ಕಾಮ್‌ ಜೊತೆ ಮಾತನಾಡಿ, ʼಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದ ಅಕಾಡೆಮಿ ಅಧ್ಯಕ್ಷ ಗೋವಿಂದ ಸ್ವಾಮಿ ಅವರಿಗೆ ಧನ್ಯವಾದ ಸಲ್ಲಿಸುವೆ. ಸುಮಾರು ಐದು ದಶಕಗಳಿಂದ ಜಾನಪದ, ಬಂಜಾರ ಸಂಸ್ಕೃತಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಈಗ ಗುರುತಿಸಿ ಆಯ್ಕೆ ಮಾಡಿದ್ದು ಖುಷಿ ನೀಡಿದೆʼ ಎಂದರು.

ಅರ್ಹತೆ ಇದ್ದರೂ ದಕ್ಕದ ಮಾಸಾಶನ :

ಗಾಯಕ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಸುಮಾರು ಐದು ದಶಕಗಳಿಂದ ಭಜನೆ ಸೇರಿದಂತೆ ಅನೇಕ ಕಲಾ ಪ್ರಕಾರಗಳಲ್ಲಿ ಸಕ್ರಿಯರಾಗಿ ತಮ್ಮ ಕಲೆ ಪ್ರದರ್ಶನ ಮಾಡುತ್ತಿದ್ದಾರೆ. ಸರ್ಕಾರ ನೀಡುವ ಕಲಾವಿದರ ಮಾಸಾಶನ ಪಡೆಯಲು ಎಲ್ಲ ರೀತಿಯ ಅರ್ಹತೆಯಿದ್ದರೂ ಸಹ ಗೋವಿಂದ ಹಾಗೂ ಅವರ ತಂಡದವರು ಮಾಸಾಶನದಿಂದ ವಂಚಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ʼಕಳೆದ ಹತ್ತು ವರ್ಷಗಳ ಹಿಂದೆ ಕಲಾವಿದರ ಮಾಸಾಶನಕ್ಕಾಗಿ ಅರ್ಜಿ ಹಾಕಿದ್ದೆ, ಆದರೆ ಯಾರೊಬ್ಬರೂ ಸ್ಪಂದಿಸಲಿಲ್ಲ. ತದನಂತರ ಪುನಃ ಅರ್ಜಿ ಹಾಕಲಿಲ್ಲ. ನಮ್ಮಂತಹ ಹಿರಿಯರಿಗೆ ಮಾಸಾಶನಕ್ಕಾಗಿ ಪರಿಗಣಿಸಬೇಕುʼ ಎಂದು ಗೋವಿಂದ ಚವ್ಹಾಣ ಅವರು ಈದಿನ.ಕಾಮ್‌ ಜೊತೆ ಮಾತನಾಡಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...