ಬ್ಯಾಂಕುಗಳ ಹಣ ಬಂಡವಾಳಿಗರ ಸಾಲ ಮನ್ನಾಗೆ ಬಳಕೆಯಾಗಬಾರದು: ಸಿ.ಹೆಚ್ ವೆಂಕಟಾಚಲಂ

Date:

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ಮಾಡುತ್ತಿದೆ. ಸರ್ಕಾರದ ಖಾಸಗೀಕರಣ ಧೋರಣೆಯನ್ನು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ತೀವ್ರವಾಗಿ ವಿರೋಧಿಸುತ್ತದೆ. ಸಾರ್ವಜನಿಕ ವಲಯದ ಬ್ಯಾಂಕುಗಳು ಗಳಿಸುವ ಲಾಭದ ಹಣವು ಈ ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕೇ ಹೊರತು, ಖಾಸಗಿ ಬಂಡವಾಳಷಾಹಿಗಳ ಸಾಲವನ್ನು ಮನ್ನಾ ಮಾಡಲು ಬಳಕೆಯಾಗಬಾರದು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಹೆಚ್ ವೆಂಕಟಾಚಲಂ ಹೇಳಿದರು.

- Advertisement -

ಬೆಂಗಳೂರಿನಲ್ಲಿ ನಡೆದ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ 10ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಿದರೆ, ದೇಶದ ಠೇವಣಿದಾರರ ಹಿತಕ್ಕೆ ಧಕ್ಕೆ ಉಂಟಾಗಲಿದೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳಲ್ಲಿ ಮಾತ್ರ ಸಾರ್ವಜನಿಕರ ಠೇವಣಿ ಹಣ ಸುರಕ್ಷಿತವಾಗಿ ಇರಲು ಸಾಧ್ಯ. ಚರಿತ್ರೆಯನ್ನು ಅವಲೋಕಿಸಿದರೆ ನಮ್ಮ ದೇಶದಲ್ಲಿ ನೂರಾರು ಖಾಸಗಿ ಬ್ಯಾಂಕುಗಳು ಮುಳುಗಡೆಯಾಗಿವೆ. ಆದರೆ 1969ರಲ್ಲಿ ನಡೆದ ಬ್ಯಾಂಕ್ ರಾಷ್ಟ್ರೀಕರಣದ ಬಳಿಕ ಯಾವುದೇ ಸರ್ಕಾರಿ ಬ್ಯಾಂಕುಗಳು ಕಳೆದ 55 ವರ್ಷಗಳಲ್ಲಿ ಸಾರ್ವಜನಿಕರ ಠೇವಣಿ ಹಣಕ್ಕೆ ಅಭದ್ರತೆಯನ್ನು ಉಂಟು ಮಾಡಿಲ್ಲ. ಸರ್ಕಾರದ ಖಾಸಗೀಕರಣ ನೀತಿಯು ದೇಶ ವಿರೋಧಿಯಲ್ಲದೇ ಬೇರೇನೂ ಅಲ್ಲ” ಎಂದು ಸಿ.ಹೆಚ್.ವೆಂಕಟಾಚಲಂ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸುವ ಮೂಲಕ ಸಾವಿರಾರು ಬ್ಯಾಂಕ್ ಶಾಖೆಗಳನ್ನು ಮುಚ್ಚಲಾಗುತ್ತಿದೆ. ಇದು ರಾಷ್ಟ್ರೀಕರಣ ನೀತಿಯನ್ನು ಬುಡಮೇಲಾಗಿಸುವ ತಂತ್ರಗಾರಿಕೆಯಾಗಿದೆ. ಕಳೆದ ಮಾರ್ಚ್ ಅಂತ್ಯದಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ನಿವ್ವಳ ಲಾಭವನ್ನು ಗಳಿಸಿದರೂ ಸರಕಾರ ಖಾಸಗೀಕರಣದ ಮಂತ್ರವನ್ನು ಜಪಿಸುತ್ತಿರುವುದು ಆಘಾತಕಾರಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು. ಖಾಲಿ ಇರುವ ಎರಡು ಲಕ್ಷಕ್ಕೂ ಹೆಚ್ಚಿನ ಖಾಯಂ ಹುದ್ದೆಗಳಿಗೆ ನೇಮಕಾತಿ ಮಾಡಿ ಸಾರ್ವಜನಿಕರಿಗೆ ಉತ್ಕೃಷ್ಟವಾದ ಸೇವೆ ಸಿಗುವಂತೆ ಮಾಡಬೇಕು” ಎಂದು ಸಿ.ಹೆಚ್ ವೆಂಕಟಾಚಲಂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಮುಕ್ತ ಕಾಲುದಾರಿ ಅಭಿಯಾನ ಆರಂಭಿಸಿದ ಸಂಚಾರ ಪೊಲೀಸ್‌

ಸಮಾರಂಭದಲ್ಲಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಶ್ರೀಕೃಷ್ಣ, ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್, ಕೆನರಾ ಬ್ಯಾಂಕಿನ ಬೆಂಗಳೂರು ವೃತ್ತ ಕಛೇರಿಯ ಉಪ ಮಹಾ ಪ್ರಬಂಧಕ ಗಣೇಶ್, ಕೆಪಿಬಿಇಎಫ್ ನ ಉಪ ಪ್ರಧಾನ ಕಾರ್ಯದರ್ಶಿ ಕೆ.ಜಿ.ಫಣೀಂದ್ರ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಅನಿರುಧ್ ಕುಮಾರ್, ಅಧಿಕಾರಿಗಳ ಸಂಘಟನೆಯ ಪ್ರಶಾಂತ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...