ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ 2026ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರಧಾನ ಮಾಡಲಾಯಿತು.
ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದ ಬನ್ನೂರು ಕೆ. ರಾಜು ಅವರು ಪಾಶ್ವವಾಯುವಿನಿಂದ ಅನಾರೋಗ್ಯಕ್ಕೀಡಾಗಿದ್ದ ಕಾರಣ ಮೈಸೂರಿನ ಕಲಾಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ಜಿಲ್ಲಾ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರು ಇಂದು ಬನ್ನೂರು ಕೆ. ರಾಜು ಅವರ ಸ್ವಗೃಹಕ್ಕೆ ಭೇಟಿ ನೀಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಡಾ. ಸುದರ್ಶನ್ ಅವರು ಬನ್ನೂರು ಕೆ. ರಾಜು ಅವರಿಗೆ ಮೈಸೂರು ಪೇಟ ತೊಡಿಸಿ, ಫಲ-ತಾಂಬೂಲ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಸನ್ಮಾನಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಪಾರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ದೀರ್ಘಕಾಲದಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಬನ್ನೂರು ಕೆ. ರಾಜು ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಮಟ್ಟದ ಈ ಪ್ರಶಸ್ತಿ ನೀಡಿರುವುದು ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.
ಈ ಸುದ್ದಿ ಓದಿದ್ದೀರಾ?ಕೊಡಗು | ಕಾಫಿ ತೋಟ ವೀಕ್ಷಣೆ ವೇಳೆ ಕಾಡಾನೆ ದಾಳಿ: ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿ ಸಾವು
ಭೇಟಿ ವೇಳೆ ಸಾಮಾಜಿಕ ಚಳವಳಿಗಾರ ಅರವಿಂದ್ ಶರ್ಮ ಇದ್ದರು.





