ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 10ನೇ ಘಟಿಕೋತ್ಸವ ಸಮಾರಂಭ

Date:

ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವುದರ ಜತೆಗೆ ಅಗತ್ಯವಿರುವ ವಿಷಯಕ್ಕೆ ಒತ್ತು ನೀಡಬೇಕು. ಅಲ್ಲದೆ ಭಾಷಾ ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅತಿಥಿಯಾಗಿ ಆಗಮಿಸಿದ ಸಂಧ್ಯಾ ಶೆಟ್ಟಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ರತಿಷ್ಠಿತ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆಯಿಂದ ಹಮ್ಮಿಕೊಂಡಿದ್ದ ಹತ್ತನೇ ಪದವಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮುಖ್ಯ ಅತಿಥಿಯಾಗಿ ಆಗಮಿಸಿದ ಗಳು, ಮೂಡಬಿದ್ರೆಯ ಅಲ್-ಫುರ್ಕಾನ್ ವಿದ್ಯಾ ಸಂಸ್ಥೆ ವ್ಯಯಸ್ಥಾಪಕ ಮುಹ್ತರಮಃ ಮುಮ್ತಾಜ್ ಬಿನ್ತ್ ಮೊಯ್ದೀನ್ ಕುಂಞ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿ, “ಜೀವನದಲ್ಲಿ ಅಡೆತಡೆಗಳು ವಿಫಲತೆಗೆ ಕಾರಣಗಳಲ್ಲ. ಬದಲಾಗಿ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಅದಕ್ಕೆ ಸಮರ್ಪಣೆ, ಶ್ರಮ ಮತ್ತು ದೃಢಸಂಕಲ್ಪ ಅಗತ್ಯ. ಗುರಿಯ ಕಡೆಗೆ ದೃಢವಾಗಿ ಪ್ರಯತ್ನಿಸುತ್ತ ಹೋದರೆ ಯಶಸ್ಸು ಖಚಿತ” ಎಂದು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಪ್ರಜ್ಞಾ ಎಂ ಅವರು 2024-25ನೇ ಸಾಲಿನ ಬಿಎ ಮತ್ತು ಬಿಕಾಂ ಪದವಿ ಪೂರೈಸಿದ ವಿದ್ಯಾರ್ಥಿನಿಯರ ಪಟ್ಟಿ ವಾಚನ ಮಾಡಿದರು.

ಅನುಗ್ರಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಯಾಸಿನ್ ಬೇಗ್ ಸಭೆಯನ್ನು ಉದ್ದೇಶಿಸಿ ಕಾಲೇಜಿನ ಸ್ಥಾಪನೆ ಮತ್ತು ಕಾಲೇಜಿನಲ್ಲಿ ನೀಡುತ್ತಿರುವ ಮೌಲ್ಯಧಾರಿತ ಶಿಕ್ಷಣದ ಬಗ್ಗೆ ಮಾತನಾಡುತ್ತ, “ಎಲ್ಲ ವಿದ್ಯಾರ್ಥಿನಿಯರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಬದುಕಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ

ವೇದಿಕೆಯಲ್ಲಿ ಇನ್ನೋರ್ವ ಅತಿಥಿ ಸಫೀನ ಬಾನು, ಉಪನ್ಯಾಸಕಿ, ಏನಪೋಯ ಇನ್ಸ್‌ಟಿಟ್ಯೂಟ್ಸ್ ಮಂಗಳೂರು, ಕಾಲೇಜಿನ ಪ್ರಾಂಶುಪಾಲೆ ಡಾ। ಹೇಮಲತ ಬಿ ಡಿ, ಸಲಹಾ ಸಮಿತಿಯ ಕಾರ್ಯದರ್ಶಿ ತಾರಾಕ್ಷಿ, ಪದವಿ ಪೂರ್ವ ವಿಭಾಗದ ಸಂಯೋಜಕಿ ಮಮಿತಾ ಎಸ್ ರೈ, ಪದವಿ ವಿಭಾಗದ ಸಂಯೋಜಕಿ ಆಬಿದ ಬಿ ಸೇರಿದಂತೆ ಕಾರ್ಯಕ್ರಮದಲ್ಲಿ ಅನುಗ್ರಹ ವಿದ್ಯಾಸಂಸ್ಥೆಗಳ ಖಜಾಂಜಿ ಹೈದರ್ ಅಲಿ, ಸಹ ಕಾರ್ಯದರ್ಶಿ ಅಬ್ದುಲ್ಲಾ ಕುಂಞ, ಕಾಲೇಜಿನ ಸಂಚಾಲಕ ಅಮಾನುಲ್ಲಾ ಖಾನ್, ಆಡಳಿತ ಮಂಡಳಿ ಸದಸ್ಯರು, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿನಿಯರು ಮತ್ತು ಪೋಷಕರು ಇದ್ದರು.

ಪ್ರಥಮ ವಿಜ್ಞಾನ ವಿಭಾಗದ ಕುಮಾರಿ ನುಹಾ ಮರಿಯಮ್ ಹೈದರ್ ಖಿರಾಅತ್ ಪಠಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಖತೀಜ ಮಾಹಿರ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ಕುಮಾರಿ ಆಸಿಯ ಅಫ್ಸಾನ ವಂದಿಸಿ, ತೃತೀಯ ಬಿಕಾಂ ವಿಭಾಗದ ಕುಮಾರಿ ಮಶೀದ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...