ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಅಲಿ ಆಕ್ರೋಶ
ದೀಪಕ್, ಪೃಥ್ವಿರಾಜ್ ಹಾಗೂ ಚೇತನ್ ಎಂಬ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.
