ಬಂಟ್ವಾಳ | ರಾಜಕಾರಣಿಗಳ ಮೇಲಿನ ಭಕ್ತಿ, ಸಂವಿಧಾನಕ್ಕೆ ಅಪಾಯ: ಕ್ಲಿಪ್ಟನ್ ರೊಜಾರಿಯೋ

Date:

ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಕ್ತಿ ತೋರಿಸಬೇಡಿ. ಇದು ಸಂವಿಧಾನಕ್ಕೆ ಸವಾಲು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ’ ರೊಜಾರಿಯೋ ಹೇಳಿದರು.

- Advertisement -

ಅವರು (ಎಐಎಲ್ಎಜೆ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬಿ ಸಿ ರೋಡಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ‘ಸಂವಿಧಾನದ ಮುಂದಿರುವ ಸವಾಲುಗಳು’ ಎಂಬ ವಿಚಾರವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಂದು ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಾರೀ ಭಕ್ತಿಯಿಂದ ನೋಡುತ್ತಿರುವುದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾಗಿದೆ. ಭಕ್ತರಾಗಿಬಿಟ್ಟರೆ ಪ್ರಭುತ್ವವನ್ನು ಪ್ರಶ್ನೆ ಮಾಡೋದು ಸಾಧ್ಯವಿಲ್ಲ. ಅಂಬೇಡ್ಕರ್ ಅವರು ಈ ಅಪಾಯವನ್ನು 1974ರಲ್ಲಿಯೇ ಹೇಳಿದ್ದರು. ಇದನ್ನು ನಾವು ಭಾರತ ಸಂವಿಧಾನದ ಭಾರೀ ಅಪಾಯವಾಗಿ ಕಾಣಬೇಕು ಎಂದು ಹೇಳಿದರು.
ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಪ್ರಜಾಪ್ರಭುತ್ವದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಸಂವಿಧಾನದ ಆಶಯಗಳನ್ನು ಸಾಧಿಸಲು ಅಡ್ಡಿಯಾಗುತ್ತಿದೆ. ಬಡವರಿಗೆ ಇಂದು ಒಬ್ಬ ನಾಗರಿಕನಾಗಿ ಚಿಂತಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಂವಿಧಾನದ ಆಶಯವನ್ನು ಮನದಟ್ಟು ಮಾಡಿಕೊಳ್ಳಲು ಕೂಡಾ ಸಾಧ್ಯವಿಲ್ಲ. “ಇಂದು ಯುವಕರು ಧರ್ಮದ ಗೋಡೆಗಳನ್ನು ಸೃಷ್ಠಿ ಮಾಡುತ್ತಿದ್ದಾರೆ. ಇದನ್ನು ಒಡೆಯಬೇಕಾಗಿದೆ. ಈ ಮೂಲಕ ನಾವು ಸಂವಿಧಾನಕ್ಕೆ ಪೂರಕವಾಗಿ ಬದುಕಬಹುದು” ಎಂದರು.

“ಸಂವಿಧಾನವನ್ನು ಎಲ್ಲರೂ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅದೇ ರೀತಿಯ ಶಿಕ್ಷಣ ನಮ್ಮ ಸಮಾಜದಲ್ಲಿ ಬೇಕಾಗಿದೆ. ಸಮಾಜದಲ್ಲಿ ಬಡವ-ಶ್ರೀಮಂತ ಎಂಬ ಭೇದ-ಭಾವ, ಜಾತಿ ಶೋಷಣೆ, ಧರ್ಮ-ಲಿಂಗ ತಾರತಮ್ಯ ಇಲ್ಲದ ಸಮಾಜ ಇಂದು ನಿರ್ಮಾಣವಾಗಬೇಕಿದೆ. ಇದು ಇಂದಿನ ಹಿರಿಯರು ಮುಂದಿನ ಸಮಾಜಕ್ಕೆ ನೀಡಬಹುದಾದ ಕೊಡುಗೆ” ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: ಬಂಟ್ವಾಳ | ಸರ್ಕಾರಿ ಸೇರಿ ಹಲವು ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ

“ದೇಶದ ಪ್ರಜಾಪ್ರಭುತ್ವ ಇಂದಿರಾ ಗಾಂಧಿ ಆಡಳಿತದಲ್ಲಿ ‘ತುರ್ತು ಪರಿಸ್ಥಿತಿ’ ಎಂಬ ಅತ್ಯಂತ ಕರಾಳ ದಿನಗಳನ್ನು ಎದುರಿಸಿತ್ತು. ಆ ಸಂದರ್ಭ ಸಂವಿಧಾನದಲ್ಲಿ ಬದಲಾವಣೆ ತರಲು ಇಂದಿರಾ ಗಾಂಧಿ ಪ್ರಯತ್ನ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಉಂಟಾಗುವ ತಿದ್ದುಪಡಿ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು. ಹೀಗಾಗಿ ಸಂವಿಧಾನ ಬದುಕಿ ಉಳಿದಿದೆ” ಎಂದರು.

ಹಿರಿಯ ವಕೀಲ ಮನೋರಾಜ್ ಹಾಗೂ ಎಐಎಲ್ಎಜೆ ಕೇಂದ್ರ ಸಮಿತಿಯ ಅವನಿ ಮಾತನಾಡಿದರು. ಜಿಲ್ಲಾಧ್ಯಕ್ಷ ತುಳಸಿದಾಸ್, ಹೈ ಕೋರ್ಟ್ ವಕೀಲೆ ಸಂಧ್ಯಾ ಪ್ರಭು, ಹಾಸನದ ವಕೀಲ ಮಹೇಶ್, ಬಂಟ್ವಾಳದ ವಕೀಲ ಶ್ರೀಧರ್ ಪೈ ಮೊದಲಾದವರು ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...