ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

Date:

ಆತ್ಮರಕ್ಷಣೆಯ ರಿವಾಲ್ವರ್‌ನಿಂದ ‘ಮಿಸ್‌ಫೈರ್’ ಆಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಮುಖಂಡರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡವರು. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ಅಚಾನಕ್ಕಾಗಿ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡಿದ್ದು, ಮಂಗಳೂರು ನಗರದ ಪಡೀಲ್‌ನಲ್ಲಿರುವ ಜನಪ್ರಿಯ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಇಂಟಕ್ ಮುಖಂಡರಾಗಿರುವ ಬೊಂಡಾಲ ಚಿತ್ತರಂಜನ್‌ ಶೆಟ್ಟಿಯವರು ಇತ್ತೀಚೆಗಷ್ಟೇ ತನ್ನ ಆತ್ಮರಕ್ಷಣೆಗಾಗಿ ಪರವಾನಗಿ ಪಡೆದು ರಿವಾಲ್ವರ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

janapriya hospital mangalore

ಇಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಡಾಜೆ ಸಮೀಪದ ಅನಂತಾಡಿ ಬಳಿ ಕಾರಿನಲ್ಲಿದ್ದ ತನ್ನದೇ ರಿವಾಲ್ವರ್‌ನ ಗುಂಡು ಆಕಸ್ಮಿಕವಾಗಿ ಸಿಡಿದು ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸ್ಪಷ್ಟತೆಯ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ. ಶೆಟ್ಟಿಯವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ರಾಜ್ಯ ಮಾಹಿತಿ ಆಯುಕ್ತರ ಆಯ್ಕೆ ಪಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಿಂದ ನೋಟಿಸ್

ಈ ಬಗ್ಗೆ ಗಾಯಾಳು ಶೆಟ್ಟಿಯವರು ದಾಖಲಾಗಿರುವ ಮಂಗಳೂರು ಪಡೀಲ್ ಜನಪ್ರಿಯ ಆಸ್ಪತ್ರೆಯ ವೈದ್ಯಾಧಿಕಾರಿ, ಡೈರೆಕ್ಟರ್ ಡಾ.ಕಿರಾಶ್ ಪರ್ತಿಪ್ಪಾಡಿಯವರನ್ನು ಈದಿನ ಡಾಟ್ ಕಾಮ್ ಸಂಪರ್ಕಿಸಿದಾಗ, “ಮಿಸ್‌ಫೈರ್ ಆಗಿ ಗಾಯಗೊಂಡಿರುವುದಾಗಿ ಪ್ರಾಥಮಿಕವಾಗಿ ನಮಗೂ ಮಾಹಿತಿ ಸಿಕ್ಕಿದೆ. ನಾನು ಬೇರೊಂದು ರೋಗಿಯ ಶಸ್ತ್ರಚಿಕಿತ್ಸೆಯಲ್ಲಿರುವ ವೇಳೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನನಗೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಮಾಹಿತಿ ಸಿಕ್ಕ ಬಳಿಕ ತಿಳಿಸುವೆ” ಎಂದು ಪ್ರತಿಕ್ರಿಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಝೀರ್ ಬಜಾಲ್ ಅವರನ್ನು ಸಂಪರ್ಕಿಸಿದಾಗ, “ಮಿಸ್‌ಫೈರ್ ಆಗಿ ಈ ಘಟನೆ ನಡೆದಿದೆ ಅಂತ ನಮಗೂ ಸಿಕ್ಕಿರುವ ಪ್ರಾಥಮಿಕ ಮಾಹಿತಿ. ಈ ಬಗ್ಗೆ ಕುಟುಂಬದ ಸದಸ್ಯರನ್ನು ಸಂಪರ್ಕಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...