ಪತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.
ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ ಜಯಂತಿ (45) ಮೃತಪಟ್ಟವರು.
ತಿಮ್ಮಪ್ಪ ತನ್ನ ಗರ್ಭಿಣಿ ಪತ್ನಿ ಜಯಂತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ, ಬಳಿಕ ತಾನೂ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿಯ ಮೃತದೇಹವು ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾಗಿತ್ತು ಎನ್ನಲಾಗಿದೆ.
ತಿಮ್ಮಪ್ಪ, ಜಯಂತಿಯವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಕೊಲೆ ಮಾಡಿದ್ದಾರೆ ಎಂದು ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಳೆಗಾಲ | ಸಂಭವನೀಯ ಹಾನಿಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮೃತ ತಿಮ್ಮಪ್ಪ ಅವರ ಅಣ್ಣ ವಿಶ್ವನಾಥ ಸಜೀಪ ಮೂಡ ಅವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.