ಬಂಟ್ವಾಳ | ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಅಸಭ್ಯವಾಗಿ ವರ್ತಿಸಿದ ಬಿಜೆಪಿ ಮುಖಂಡ!

Date:

ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು ಎಂಬಲ್ಲಿ ನಡೆದಿದೆ.

- Advertisement -

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಬಿಜೆಪಿ ಸದಸ್ಯ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ, ಸ್ಥಳೀಯ ನಿವಾಸಿಯೂ ಆಗಿರುವ ಪದ್ಮನಾಭ ಸಪಲ್ಯ ಗೇಟಿಗೆ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂ‌ಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿಯನ್ನು ಜಾರಿಸಿದ್ದಲ್ಲದೇ, ಗುಪ್ತಾಂಗವನ್ನು ತೋರಿಸುವ ಮೂಲಕ ವಿಕೃತಿ ಮೆರೆದಿದ್ದಾನೆ. ಘಟನೆಯನ್ನು ಸಂತ್ರಸ್ತ ಮಹಿಳೆಯು ಮೊಬೈಲ್‌ನಲ್ಲಿ ಸೆರೆ ಹಿಡಿದ್ದಿದ್ದಲ್ಲದೇ, ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಮೇ 3ರಂದು ನಡೆದಿದ್ದು, ಅಂದೇ ಸಂತ್ರಸ್ತ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರೂ, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲೂ ಹರಿದಾಡಿದ್ದು, ವೈರಲಾಗಿದೆ.

ಸೆರೆಯಾಗಿರುವ ವಿಡಿಯೋದಲ್ಲಿ ಆರೋಪಿ ಪದ್ಮನಾಭ ಸಪಲ್ಯನ ಪಕ್ಕದಲ್ಲೇ ಅಪ್ರಾಪ್ತ ಪುಟ್ಟ ಬಾಲಕಿ ಕೂಡ ಇರುವುದು ಕಂಡು ಬಂದಿದೆ. ಆ ಬಾಲಕಿ ಪದ್ಮನಾಭ ಸಪಲ್ಯನ ಕುಟುಂಬ ಸದಸ್ಯೆ ಎಂದು ತಿಳಿದುಬಂದಿದೆ.

ವಿಕೃತ ಬುದ್ದಿಯ ಪದ್ಮನಾಭ ಸಪಲ್ಯ ವಿರುದ್ಧ ಪುಷ್ಪಾವತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಆರೋಪಿ ಪದ್ಮನಾಭ ಸಪಲ್ಯನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 79ರಂತೆ ಎಫ್‌ಐಆರ್ ದಾಖಲಾಗಿದೆ. ಆದರೆ, ಆರೋಪಿಯನ್ನು ವಿಟ್ಲ ಪೊಲೀಸರು ಈವರೆಗೂ ಬಂಧಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅರೋಪಿ
ಆರೋಪಿ ಪದ್ಮನಾಭ ಸಪಲ್ಯ

ಘಟನೆಯ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿರುವ ಸಂತ್ರಸ್ತ ಮಹಿಳೆಯ ಮಗ ಕಿಶೋರ್, “ಜಮೀನದ ದಾರಿಯ ವಿಚಾರವಾಗಿ ಆರೋಪಿ ಪದ್ಮನಾಭ ಸಪಲ್ಯ ಹಾಗೂ ನಮ್ಮ ನಡುವೆ ತಕರಾರಿದೆ. ಸದ್ಯ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ, ಮೇ.3ರಂದು ನಾವು ಓಡಾಡಬಾರದೆಂಬ ಉದ್ದೇಶದಿಂದ ತಡೆಬೇಲಿ ಹಾಕುವುದು ನನ್ನ ಅಮ್ಮನ ಗಮನಕ್ಕೆ ಬಂದಿದೆ. ಕೂಡಲೇ ಸ್ಥಳಕ್ಕೆ ವಿಡಿಯೋ ರೆಕಾರ್ಡಿಂಗ್ ಆನ್ ಮಾಡಬೇಕೆಂದು ನನ್ನ ತಾಯಿ ಹೋದಾಗ ಈ ರೀತಿ ಅಸಭ್ಯವಾಗಿ ವರ್ತಿಸಿದ್ದಾನೆ. ಪೊಲೀಸರು ಈವರೆಗೂ ಆರೋಪಿಯ ವಿರುದ್ಧ ಕ್ರಮ ಕೂಡ ಕೈಗೊಂಡಿಲ್ಲ ಹಾಗೂ ಬಂಧಿಸಿಯೂ ಇಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಯುದ್ಧದ ಭೀಕರತೆಯೂ.. ಕುವೆಂಪು ನೀಡಿರುವ ಎಚ್ಚರಿಕೆಯೂ..

ಮಾತೆತ್ತಿದರೆ ಮಹಿಳೆಯರ ಬಗ್ಗೆ ಘನತೆ, ಗೌರವ, ದೇಶಪ್ರೇಮ, ಮಾತೆಯರ ರಕ್ಷಣೆ ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿ ಪಕ್ಷದ ಪದ್ಮನಾಭ ಸಪಲ್ಯನ ವಿಕೃತ ಚೇಷ್ಟೆ ಸಭ್ಯ ನಾಗರಿಕರನ್ನು ತಲೆತಗ್ಗಿಸುವಂತೆ ಮಾಡಿದೆ. ವಿಟ್ಲ ಪೊಲೀಸರು ಕೂಡಲೇ, ಆರೋಪಿ ಪದ್ಮನಾಭ ಸಪಲ್ಯನನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...