ಬಂಟ್ವಾಳ | ಯುವತಿಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ: ಆರು ಮಂದಿಯ ಬಂಧನ

Date:

ಯುವತಿಯೋರ್ವಳನ್ನು ಭೇಟಿ ಮಾಡಲೆಂದು ಬಂದಿದ್ದ ಯುವಕನೋರ್ವನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನಡೆದಿದೆ.

- Advertisement -

ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನ.7ರಂದು ಈ ಘಟನೆ ನಡೆದಿದ್ದು, ಹಲ್ಲೆ ನಡೆಸಿರುವ ವಿಡಿಯೋ ವೈರಲಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಈಗಾಗಲೇ ಆರು ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಲ್ಲೆಗೊಳಗಾದ ಯುವಕನನ್ನು ಮಹಮ್ಮದ್‍ ಮುಸ್ತಫಾ(21) ಎಂದು ಗುರುತಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

WhatsApp Image 2024 11 11 at 1.11.30 PM 1

ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಂಚಿನಡ್ಕಪದವು ಸಜೀಪನಡು ಗ್ರಾಮದ ನಿವಾಸಿಗಳಾದ ಮಹಮ್ಮದ್‌ ಸಫ್ವಾನ್(25), ಮಹಮ್ಮದ್‌ ರಿಜ್ವಾನ್‌ (25), ಇರ್ಫಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಶಾಕೀರ್‍ (18) ಎಂಬ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.

ಬಂಟ್ವಾಳ 4

ನವೆಂಬರ್ 7ರಂದು ರಾತ್ರಿ 10.00 ಗಂಟೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಯುವಕ ಮಹಮ್ಮದ್‍ ಮುಸ್ತಫಾ ಎಂಬಾತನನ್ನು ಆತನ ದೂರದ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಸಜೀಪನಡು ಕಂಚಿನಡ್ಕಪದವು ಎಂಬಲ್ಲಿಗೆ ಬಂದಾಗ ಆರೋಪಿಗಳು ಮಹಮ್ಮದ್‍ ಮುಸ್ತಫಾನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು, ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಮೊಬೈಲ್‌ನಲ್ಲಿ ಕೂಡ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರು.

ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬೆನ್ನಲ್ಲೇ, ಸಂತ್ರಸ್ತ ಯುವಕ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ದೂರಿನ ಅನ್ವಯ ಕಲಂ 115(2), 126(2), 189(2), 190, 191(2), 191(3),351(2),352 ಬಿಎನ್‍ಎಸ್‍ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಮೂಡಬಿದ್ರೆ | ಬೈಕ್ ಸವಾರರ ಮೇಲೆ ಹರಿದ ಖಾಸಗಿ ಬಸ್: ರೊಚ್ಚಿಗೆದ್ದ ಜನರಿಂದ ಬಸ್ಸಿನ ಗಾಜು ಪುಡಿಪುಡಿ

ಹಲ್ಲೆಗೊಳಗಾದ ಮುಸ್ತಫಾ, ತನಗಾದ ಗಾಯದ ನೋವು ಹೆಚ್ಚಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್‍ ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಹೈಲ್ಯಾಂಡ್‍ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ ಯುವಕ, ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಗುಂಪು ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದಾಗಿ ಹೇಳಿಕೆ ನೀಡಿದ್ದ.

ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಕಲಂ 109, 117(4) ಬಿಎನ್ಎಸ್‍ ಕಾಯ್ದೆಯನ್ನು ಹೆಚ್ಚುವರಿಯಾಗಿ ಸೇರಿಸಿ, ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಸದ್ಯ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...