ಬಂಟ್ವಾಳ | ತಮ್ಮ ಮಕ್ಕಳನ್ನು ಪೋಷಕರು ಇತರರೊಂದಿಗೆ ಹೋಲಿಕೆ ಮಾಡಬಾರದು: ಡಾ. ಬೀರಾನ್ ಮೊಯ್ದಿನ್

Date:

ಪೋಷಕರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು ಎಂದು ಪುಣೆಯ ಡಿ. ವೈ. ಪಾಟೀಲ್ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಬೀರಾನ್ ಮೊಯ್ದಿನ್ ಸಲಹೆ ನೀಡಿದರು.

- Advertisement -

ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇದರ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವ ‘WEMS SPARK 2K25’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಈ ವಿದ್ಯಾ ಸಂಸ್ಥೆಯು ನೆಲೆಗೊಂಡಿರುವ ‘ಗಡಿಯಾರ’ ಎಂಬ ಪರಿಸರವು ತನ್ನ ತವರೂರು ಎಂಬುವುದನ್ನು ನೆನಪಿಸಿಕೊಂಡು, ಈ ಊರಿನ ಬಗೆಗಿನ ಪ್ರೀತಿ ಮತ್ತು ಆತ್ಮೀಯತೆ ಅಷ್ಟೊಂದು ದೂರದಿಂದ ಪ್ರಯಾಣ ಮಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಲ್ಲಿ ನನಗೆ ಪ್ರೇರಣೆಯಾಯಿತು. ಪೋಷಕರಿಗೆ ಪ್ರತಿಯೊಂದು ಮಕ್ಕಳಲ್ಲಿ ಪ್ರತ್ಯೇಕ ಪ್ರತಿಭೆಗಳಿರುತ್ತವೆ. ಆದ್ದರಿಂದ ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬೇಡಿ. ಪೋಷಕರ ಹಾಗೂ ಶಿಕ್ಷಕರ ಜೊತೆಯಲ್ಲಿ ಪ್ರಾಮಾಣಿಕವಾಗಿರಲು ಮಕ್ಕಳಿಗೆ ಸೂಚಿಸಿ, ಜವಾಬ್ದಾರಿಯರಿತು ಎಲ್ಲರನ್ನೂ ಗೌರವಿಸುತ್ತಾ ಬಾಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಬುಡೋಳಿ (ಅಬುಧಾಬಿ) ರವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಯಾವುದೇ ಅವಶ್ಯಕತೆಗಳನ್ನು ಪೂರೈಸಲು ಆಡಳಿತ ಮಂಡಳಿ ಬದ್ಧವಾಗಿದೆ ಮತ್ತು ಅದರೊಂದಿಗೆ ಪೋಷಕರ ಹಾಗೂ ಇಲ್ಲಿನ ನಾಗರಿಕರ ಸಹಕಾರ ದೊರೆತಾಗ ನಮಗೆ ಯಶಸ್ಸನ್ನು ಸಾಧಿಸಬಹುದು ಹಾಗೂ ಮುಂದಿನ ದಿನಗಳಲ್ಲಿ ಕೂಡಾ ಉತ್ತಮ ಸಲಹೆ, ಸಹಕಾರಕ್ಕಾಗಿ ಸಭೆಯನ್ನು ವಿನಂತಿಸಿಕೊಂಡರು.

WhatsApp Image 2025 12 27 at 5.30.29 PM

ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ಲೋಬಲ್ ಗ್ಯಾನ್ ಅಕಾಡೆಮಿ ಇದರ ವ್ಯವಸ್ಥಾಪಕ ನಿರ್ದೇಶಕಿ ಡಾ. ರುಕ್ಸಾನಾ ಹಸನ್ ಅತಿಥಿಯಾಗಿ ಮಾತನಾಡಿದರು.

ಈ ಸಂಧರ್ಭದಲ್ಲಿ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷ ಸುರೇಶ್ ಪೂಜಾರಿ ಕನ್ನೋಟ್, ಗ್ರಾಮಾಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ವಿಸ್ಡಮ್ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ, ಮುಖ್ಯ ಶಿಕ್ಷಕಿ ಆಮಿನಾ ಬಾನು, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ರಾಜೇಶ್ವರಿ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಮುರ್ಷಿದಾ ಕೆ. ವೇದಿಕೆಯಲ್ಲ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಗದಗ | ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಸ್ಪೀಕರ್ ಯು.ಟಿ. ಖಾದರ್‌

ವಿದ್ಯಾರ್ಥಿನಿಗಳಾದ ಝಿಯಾನಾ, ಹಿಬಾ, ಫಿದಾ, ರಿಝಾ, ಧನ್ಯಶ್ರೀ ಮತ್ತು ಆರಿಫಾ ರವರು ಪ್ರಾರ್ಥನಾ ಗೀತೆ ಹಾಡಿದರು. ಸಹ ಶಿಕ್ಷಕಿ ಶ್ರೀಮತಿ ಅಲಿಮತ್ ಸಅದಿಯಾ ಸ್ವಾಗತಿಸಿದರು. ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಹಶಿಕ್ಷಕಿಯರುಗಳಾದ ಶ್ರೀಮತಿ ಆಬಿದಾ ಬೇಗಂ, ಕುಮಾರಿ ತಸ್ಮಿನಾ ಹಾಗೂ ಸಹ ಶಿಕ್ಷಕರಾದ ಹೈದರ್, ಫಝಲ್, ಸಹ ಶಿಕ್ಷಕಿಯರುಗಳಾದ ಶ್ರೀಮತಿ ಮುಬೀನಾ ಶುಭಾನ್, ಕುಮಾರಿ ಸಮ್ರೀನಾ, ಆಶಿಕಾ, ಮುಬೀನಾ ಹಾಗೂ ಅಶ್ಫಿಯಾ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳಿಂದ ಕರಾಟೆ ಶಿಕ್ಷಕ ಅಬ್ದುಲ್ ರಹಮಾನ್ ನಿರ್ದೇಶನದಲ್ಲಿ ಆತ್ಮ ರಕ್ಷಣಾ ಕಲಾ ಮನೋರಂಜನೆಯ ಪ್ರದರ್ಶನಗಳನ್ನು ನೀಡಲಾಯಿತು. ಸಹ ಶಿಕ್ಷಕಿ ಶ್ರೀಮತಿ ಫಾತಿಮತ್ ಸಿನಾನರವರು ಕಾರ್ಯಕ್ರಮವನ್ನು ನಿರೂಪಣೆಗೈದರೆ, ಶಿಕ್ಷಕಿ ಶ್ರೀಮತಿ ಮೀನಾಕ್ಷಿ ಧನ್ಯವಾದವಿತ್ತರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ನಿರ್ದೇಶಕರಾದ ಪ್ರಹ್ಲಾದ್ ಶೆಟ್ಟಿ ಮತ್ತು ವಿಸ್ಡಮ್ ಶಾಲಾ ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಕಲ್ಲಾಜೆ ಸಹಿತ ಅನೇಕ ಗಣ್ಯರು ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

WhatsApp Image 2025 12 27 at 5.30.32 PM
WhatsApp Image 2025 12 27 at 5.30.28 PM
WhatsApp Image 2025 12 27 at 5.30.05 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...