ಬಂಟ್ವಾಳ | ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ರಾಜಕೀಯ ಸಭೆ; ಪಿಡಿಒ ಅಮಾನತು

Date:

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜೂ. 23 ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗೋಕುಲ್‌ ದಾಸ್‌ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಅಮಾನತುಗೊಳಿಸಿದ್ದಾರೆ.

- Advertisement -

ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಇಒ ಗೋಕುಲ್‌ ದಾಸ್‌ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದರು. ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಪಿಡಿಒ ವಿವರಣೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನೂ ಓದಿ: ಮಂಗಳೂರು | ತಾನು ಕೆಲಸ‌ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು

ಆದರೆ ಅದನ್ನು ಒಪ್ಪತಕ್ಕದಲ್ಲ. ಸರ್ಕಾರಿ ಕಚೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಿಗೆ ಅವಕಾಶ ನೀಡಬಾರದು. ಇಲ್ಲಿ ಪಿಡಿಒ ಅವರ ಕರ್ತವ್ಯಲೋಪವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಉಲ್ಲೇಖಿಸಿ ಬಂಟ್ವಾಳ ಇಒ ವರದಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...