ಬಂಟ್ವಾಳ | ಮದುವೆಗೆ ನಿರಾಕರಣೆ: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ

Date:

ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿ ನಡೆದಿದೆ.

- Advertisement -

ಮೃತ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್ (30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಆದರೂ ಸಹ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದನು.

ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿದ್ದಿದ್ದು, ಇದನ್ನು ನೋಡಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ದಿವ್ಯಾಳ ಬಾಡಿಗೆ ಮನೆಗೆ ತೆರಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸಂತ್ರಸ್ತ ಅಶ್ರಫ್ ಕುಟುಂಬಕ್ಕೆ ಯುಟಿ ಖಾದರ್, ಸಚಿವ ಜಮೀರ್‌ರಿಂದ ಪರಿಹಾರ ವಿತರಣೆ

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...