ಬಂಟ್ವಾಳ | ಸರಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಎಸ್‌ಐಓ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ದಾನಿಗಳ ನೆರವಿನಿಂದ ಎರಡು ಕಂಪ್ಯೂಟರ್ ಕೊಡುವ ಮೂಲಕ ವಿದ್ಯಾರ್ಥಿ ಸಂಘಟನೆಯಾದ ಎಸ್‌ಐಓನ ಪದಾಧಿಕಾರಿಗಳು ಮಾದರಿಯಾಗಿದ್ದಾರೆ.

- Advertisement -

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಸ್‌ಐಓ ಕರ್ನಾಟಕ ಘಟಕದ ವತಿಯಿಂದ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಪ್ರವಾದಿ ಮುಹಮ್ಮದ್(ಸ) ಮಾದರಿ ಶಿಕ್ಷಕ ಎಂಬ ಅಭಿಯಾನವನ್ನು ಹಮ್ಮಿಕೊಂಡಿತ್ತು. ಈ ಅಭಿಯಾನದ ಭಾಗವಾಗಿ ಎಲ್ಲ ಶಾಲೆಗಳಿಗೆ ಎಸ್‌ಐಓ ಪದಾಧಿಕಾರಿಗಳು ತೆರಳಿ, ಗಿಫ್ಟ್ ಕೊಟ್ಟು ಶಿಕ್ಷಕರನ್ನು ಗೌರವಿಸುವ ಕಾರ್ಯವನ್ನು ಹಮ್ಮಿಕೊಂಡಿತ್ತು. ಅಭಿಯಾನದ ಭಾಗವಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಗಿತ್ತು .ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಆದಮ್ ರವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಸಿಕ್ಕಿತ್ತು. ಎಸ್ಐಓ ಪಾಣೆಮಂಗಳೂರು ಘಟಕದ ವತಿಯಿಂದ ಅವರನ್ನು ಭೇಟಿಯಾಗಿ ಶುಭ ಹಾರೈಸಿದ ಸಂದರ್ಭದಲ್ಲಿ ಎಸ್ಐಓ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ AI (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಕಾಲದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಪ್ಯೂಟರ್ ಜ್ಞಾನ ತುಂಬಾ ಅಗತ್ಯವಿದ್ದು, ನಮ್ಮ ಶಾಲೆಯ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆಯುವಂತಾಗಲೂ ಸಂಘಟನೆ ವತಿಯಿಂದ ಶಾಲೆಗೆ ಕಂಪ್ಯೂಟರ್ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಇದನ್ನು ಮನಗಂಡ ಎಸ್‌ಐಓ ಪಾಣೆಮಂಗಳೂರು ಘಟಕದ ಪದಾಧಿಕಾರಿಗಳು ದಾನಿಗಳನ್ನು ಭೇಟಿಯಾಗಿ ಶಾಲೆಗೆ ಎರೆಡು ಕಂಪ್ಯೂಟರ್ ಕೊಡುಗೆಯಾಗಿ ನೀಡುವಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಂದು ಶಾಲೆಯಲ್ಲಿ ಕಂಪ್ಯೂಟರ್ ಅನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಆದಮ್, “ಎಸ್ಐಓ ಈ ಸಂಘಟನೆಗೆ ತಾನು ಆಭಾರಿ ಆಗಿದ್ದೇನೆ . ತಾನು ಕಲಿಸದಿದ್ದರೂ ಶಿಕ್ಷಣ ನೀಡುವ ಎಲ್ಲಾ ಶಿಕ್ಷಕರನ್ನು ಗೌರವಿಸುವ ಒಂದು ಗುಣ ತಾನು ತನ್ನ ಜೀವನದಲ್ಲಿ ಇದುವರೆಗೂ ಅನುಭವ ಆಗಿಲ್ಲ ಮತ್ತು ಹಲವಾರು ದಾನಿಗಳನ್ನು ಭೇಟಿಯಾಗಿ ಒಂದೂವರೆ ತಿಂಗಳೊಳಗೆ ತಾನಿಟ್ಟ ಬೇಡಿಕೆಯನ್ನು ಈಡೇರಿಸಿದ್ದೀರಿ. ಒಂದು ಸಂಘಟನೆಯಲ್ಲಿ ಸೇರಿ ಸಮಾಜಕ್ಕೆ ಪ್ರಯೋಜನ ವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಅದರಲ್ಲೂ ವಿದ್ಯಾರ್ಥಿ ಸಂಘಟನೆಯಾಗಿ ವಿದ್ಯಾರ್ಥಿಗಳ ಕಷ್ಟಗಳಿಗೆ ಸ್ಪಂದಿಸುವ ಮನಸ್ಸು ಯಾರಿಗೂ ಸಿಗುವುದಿಲ್ಲ. ದೇವರ ಅನುಗ್ರಹ ಸದಾ ಇರಲಿ” ಎಂದು ಆಶಿಸಿದರು.

ನಂತರ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋಲ ಸಿವಿಲ್ಯ ಪಿಂಟೋ, ದೇಶದ ಹಿತಕ್ಕಾಗಿ ನಾಡಿನ ಉದ್ಧಾರಕ್ಕಾಗಿ ವಿದ್ಯಾರ್ಥಿಗಳು, ಯುವಕರು ಇಂತಹ ಗುಣಗಳನ್ನು ಮೈಗೂಡಿಸಬೇಕು. ಮಕ್ಕಳು ಸಮಾಜವನ್ನು ಅರ್ಥಮಾಡಿ ಒಳ್ಳೆಯ ದಾರಿಯಲ್ಲಿ ನಡೆಯಬೇಕು ಎಂದರು.

WhatsApp Image 2025 11 06 at 3.44.20 PM

ನಂತರ ಎಸ್ಐಓ ಪಾಣೆಮಂಗಳೂರು ಘಟಕದ ವತಿಯಿಂದ ಕಂಪ್ಯೂಟರ್ ಅನ್ನು ಎಸ್‌ಡಿಎಂಸಿ ಅಧ್ಯಕ್ಷರ ನೇತೃತ್ವದಲ್ಲಿ ಶಾಲೆಗೆ ಹಸ್ತಾಂತರ ಮಾಡಲಾಯಿತು.

ನಂತರ ಮಾತನಾಡಿದ ಎಸ್ ಐ ಓ ಪಾಣೆಮಂಗಳೂರು ಘಟಕದ ಅಧ್ಯಕ್ಷರಾದ ಚೆಂಡಾರಿ ಮುಬಾರಿಶ್, “ಸವಿದ್ಯಾರ್ಥಿಗಳು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ, ಪ್ರೀತಿಯನ್ನು ಹಂಚುವ ಮೂಲಕ ದೇಶ ಸೇವೆಯನ್ನು ಮಾಡಬೇಕು. ಯಾವುದೇ ಧರ್ಮ ಮನುಷ್ಯರನ್ನು ಪ್ರೀತಿಸಲು ಹೇಳಿದೆ ಹೊರತು ದ್ವೇಷಿಸಲು ತಿಳಿಸಿಲ್ಲ. ಸರ್ವೇ ಜನ ಸುಖಿನೋ ಭವಂತು. ಇದರಲ್ಲಿ ಎಲ್ಲ ಮಾನವ ಸಮೂಹಕ್ಕೆ ಸುಖದ ಪ್ರಾರ್ಥನೆ ಇದೆ ಹೊರತು ಅದರಲ್ಲಿ ಬೇರೆ ಬೇರೆ ಧರ್ಮ/ಜಾತಿಗಳನ್ನು ಹೆಸರನ್ನು ಸೂಚಿಸಿಲ್ಲ . ವಿದ್ಯಾರ್ಥಿಗಳು ವಿದ್ಯೆಯನ್ನು ಕೇವಲ ಅಂಕಗಳಿಗೋಸ್ಕರ ಮಾತ್ರ ಪಡೆಯದೇ ಉತ್ತಮ ಶಿಕ್ಷಣ ಪಡೆದು ಶಾಂತಿಯ ಸಹನೆಯ ಪ್ರೀತಿ ವಿಶ್ವಾಸದ ದೇಶ ಕಟ್ಟುವಂತಾಗಬೇಕೆಂದರು.

ನಂತರ ಮಾತನಾಡಿದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ.ಪುರುಷೋತ್ತಮ ಬಿ, “ಸಂಘ ಸಂಸ್ಥೆಗಳನ್ನು ಕಟ್ಟುವುದು ದೊಡ್ಡ ವಿಷಯವಲ್ಲ.ಆದರೆ ,ಅವುಗಳನ್ನು ನಡೆಸಿಕೊಂಡು ಹೋಗುವುದು ಕಷ್ಟ. ನಿಮ್ಮನ್ನು ನೋಡಲು ತುಂಬಾ ಖುಷಿಯಾಗುತ್ತದೆ ಹಾಗೂ ಹೆಮ್ಮೆ ಅನಿಸುತ್ತದೆ ,ಬ್ಯಾಟ್ ಹಿಡಿದುಕೊಂಡು ಆಡುವ ಈ ಸಮಯದಲ್ಲಿ ಒಂದು ಮೂಲೆಯಲ್ಲಿರುವ ಸರಪಾಡಿ ಶಾಲೆಗೆ ಬಂದು ಹಾಗೂ ಇನ್ನಿತರ ಶಾಲೆಗಳಿಗೆ ಹೋಗಿ ವಿದ್ಯಾರ್ಥಿಗಳ ತೊಂದರೆಗಳಿಗೆ ಸ್ಪಂದಿಸುವಂತಹಾ ಇಂತಹ ಮನಸ್ಸು ಭಗವಂತ ಎಲ್ಲರಿಗೂ ನೀಡುವುದಿಲ್ಲ. ತಾವುಗಳು ಪುಣ್ಯವಂತರು , ಇಂತಹ ಜನ ಸ್ನೇಹಿ ಕಾರ್ಯಗಳಿಂದ ನೀವು ಎಂತಹ ಜನರು ಎಂದು ತಿಳಿಯುತ್ತದೆ , ಒಂದು ಒಳ್ಳೆಯ ಬೀಜ ಬಿತ್ತಿದರೆ ಮಾತ್ರ ಒಳ್ಳೆಯ ಫಸಲು ಸಿಗಲು ಸಾಧ್ಯ ಎಂಬಂತೆ ಇದರಿಂದ ನಿಮ್ಮ ಹೆತ್ತವರು ನಿಮಗೆ ಹೇಗೆ ಜೀವನ ನಡೆಸಬೇಕೆಂದು ಕಲಿಸಿಕೊಟ್ಟಿರುತ್ತಾರೆ ಎಂದು ತಿಳಿಯುತ್ತದೆ. ನಮ್ಮ ವಿದ್ಯಾರ್ಥಿಗಳ ಯಶಸ್ವಿನ ಹಿಂದೆ ನಿಮ್ಮ ಈ ತ್ಯಾಗ ಸದಾ ಜೀವಂತ ಇರುತ್ತದೆ. ಸರಪಾಡಿ ಎಂಬುದು ದೈವಿಕ ಶಕ್ತಿಯುಳ್ಳ ಪ್ರದೇಶವಾಗಿದೆ. ನಿಮ್ಮ ಇಂತಹ ಸೇವೆಗೆ ಭಗವಂತನ ಮೆಚ್ಚುಗೆ ಇರುತ್ತದೆ” ಎಂದು ಶುಭ ಹಾರೈಸಿದರು . ಕಿಶೋರಿ ಟೀಚರ್ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಎಸ್ಐಓ ಸಂಘಟನೆಯ ಜಿಲ್ಲಾಧ್ಯಕ್ಷ ರಿಝ್ವಾನ್ , ಎಸ್ಐಓ ಪಾಣೆಮಂಗಳೂರು ಘಟಕದ ಸದಸ್ಯರಾದ ಇಸ್ಮಾಯಿಲ್, ಮುತಹರ್, ಅಫ್ಸಾನ್ ಬೋಳಂಗಡಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...