ಬಂಟ್ವಾಳ | ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆ ಕಾರ್ಯಕ್ರಮ

Date:

ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು.

- Advertisement -

ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಮಾತನಾಡಿ, “ಸುಜೀರು ಶಾಲೆಗೆ ಶಶಿಮಂಗಳ ರೀತಿಯ ಮುಖ್ಯೋಪಾಧ್ಯಾಯಿನಿ ಸಿಗಲು ಸಾಧ್ಯವಿಲ್ಲ. ಶಶಿಮಂಗಳ ಅವರು ವಿದ್ಯಾರ್ಥಿಗಳು ಹಾಗೂ ಪಾಲಕರ ಮನಗೆದ್ದಿದ್ದಾರೆ. ಅವರು ಇಂದಿನ ಶಿಕ್ಷಕರಿಗೆ ಮಾದರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಸ್‌ಡಿಎಂಸಿಯ ಮಾಜಿ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ಮಾತನಾಡಿ, “ಶಶಿಮಂಗಳ ಅವರು ಸಹನೆ ಸಾಧನೆ ಉಳ್ಳವರು. ವಿದ್ಯಾರ್ಥಿಗಳನ್ನು ಒಳ್ಳೆಯ ನಾಗರಿಕರನ್ನಾಗಿ ಮಾಡಿದ್ದಾರೆ. ರಾಷ್ಟ್ರಮಟ್ಟದ ಕ್ರೀಡೆಗೆ ಪ್ರೋತ್ಸಾಹ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, “ಶಶಿಮಂಗಳ ಅವರು ಇಡೀ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕಿ” ಎಂದರು.

ಸುಜೀರು ಶಾಲೆ

ನಿವೃತ್ತ ಶಿಕ್ಷಕ ಮೊಹಮ್ಮದ್ ತುಂಬೆ ಮಾತನಾಡಿ, “ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರವಿದೆ. ಶಶಿಮಂಗಳ ಅವರು ಮೃದು ಸ್ವಭಾವದವರು. ಅಭಿವೃದ್ಧಿ ದೃಷ್ಟಿಯಲ್ಲಿ ಕೆಲಸ ಕಾರ್ಯ ಮಾಡಿದ್ದಾರೆ” ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಶಶಿಮಂಗಳ, “ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ನಾನು ಶಿಕ್ಷಕಿಯಾಗುವ ಗುರಿಯನ್ನು ಇಟ್ಟುಕೊಂಡಿಲ್ಲ. ಶಿಕ್ಷಕ ವೃತ್ತಿಯು ಜೀವಂತ ಇರುವ ವ್ಯಕ್ತಿಗಳ ಜೊತೆ ಮಾಡುವ ವೃತ್ತಿ” ಎಂದರು.

bilkoduge

“ಶಿಕ್ಷಕರಲ್ಲಿನ ಸಂಸ್ಕಾರ, ಸಂಸ್ಕೃತಿ, ಸಮಯಪಾಲನೆ, ಸೌಮ್ಯತೆ, ಪ್ರಾಮಾಣಿಕತೆಯಂತಹ ಗುಣಗಳನ್ನು ಯುವಪೀಳಿಗೆಗೆ ಧಾರೆ ಎರೆಯಬೇಕು. ಭವಿಷ್ಯ ಭಾರತದಲ್ಲಿನ ಉತ್ತಮ ಸಮಾಜದ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಬೇಕು” ಎಂದು ಸಲಹೆ ನೀಡಿದರು.

ಪುದು ಗ್ರಾಮ ಪಂಚಾಯತ್ ಅಧ್ಯಕ್ಷೆ ರಶೀದಾ, ಉಪಾಧ್ಯಕ್ಷ ಇಕ್ಬಾಲ್ ಸುಜೀರ್, ಟಿಕೆ ಬಶೀರ್, ಅಬ್ದುಲ್ ಮಜೀದ್, ಭಾಸ್ಕರ್ ರೈ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...