ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಂಗಳವಾರ ಸಂಜೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಬಗ್ಗೆ ಎಂದು ವರದಿಯಾಗಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಇಮ್ತಿಯಾಝ್ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಈ ದಾಳಿಯಲ್ಲಿ ರಹೀಂ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕೊಳತ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹೀಂ ಕೊಲೆಗೀಡಾದ ಯುವಕ ಎಂದು ತಿಳಿದು ಬಂದಿದೆ. ಗಂಭೀರವಾಗಿ ಹಲ್ಲೆಗೀಡಾಗಿರುವ ಇಮ್ತಿಯಾಝ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪಿಕಪ್ ಮಾಲೀಕ ರಹೀಂ ಮನೆಯೊಂದರ ಬಳಿ ಮರಳು ಅನ್ಲೋಡ್ ಮಾಡಿ ವಾಪಾಸಾಗುವ ಸಮಯದಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?
ಹತ್ಯೆಯಾದ ರಹೀಂ ಎಸ್.ಕೆ.ಎಸ್.ಎಸ್.ಎಫ್. ಕಾರ್ಯಕರ್ತನಾಗಿದ್ದು ಕೊಳ್ತಮಜಲು ಮಸೀದಿಯ ಕಾರ್ಯದರ್ಶಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವೆನ್ ಲಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.