ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

Date:

ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆಗಳನ್ನು ನೀಡಿ ಫೋರ್ಜರಿ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸರೇ ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಫೋರ್ಜರಿ ಮಾಡಿದ ಆರೋಪದಡಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರದೀಪ್‌ ಹಾಗೂ ಸುಳ್ಳು ದಾಖಲೆ ನೀಡಿ ಪಾಸ್‌ಪೋರ್ಟ್‌ ಪಡೆದ ಶಕ್ತಿ ದಾಸ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ...

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ ಆಗಿರಲಿ ಮೂಲಕ್ಕೆ ಇಳಿದು, ವಿಜ್ಞಾನಿಯ ತರಹ fundamental ಗಳನ್ನು ಚಿಂತಿಸುವ ಬಗೆಯನ್ನು- ಅದರ ಅಗತ್ಯವನ್ನು- ಕರ್ನಾಟಕ ಸಾಂಸ್ಕೃತಿಕ ಲೋಕದ ಜತೆಗೆ...

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ರದ್ದತಿಯತ್ತ ರಾಜ್ಯ ಸರ್ಕಾರದ...

ಈ ಕಾಯ್ದೆಯ ರಚನಾ ಪ್ರಕ್ರಿಯೆಯಲ್ಲಿಯೇ ಹಲವು ಲೋಪಗಳಿದ್ದವು ಎಂಬುದು ಹಳೆಯ ಸರ್ಕಾರಿ ದಾಖಲೆಗಳಿಂದಲೇ ಸಾಬೀತಾಗಿದೆ. 2022ರಲ್ಲಿ ಸುಗ್ರೀವಾಜ್ಞೆ ಹಾಗೂ ಮಸೂದೆಗೆ ಸಂಪುಟದ ಅನುಮೋದನೆ ಪಡೆಯುವ ಮುನ್ನವೇ ರಾಜ್ಯ ಕಾನೂನು ಇಲಾಖೆಯು ಇದರ ಹಲವು...

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ಕೆಲಸ ಮಾಡುತ್ತಿದ್ದ ವಿಟ್ಲ ಪೊಲೀಸ್ ಠಾಣೆಯಲ್ಲೇ ಎಫ್‌‌ಐಆರ್ ದಾಖಲಾಗಿದೆ.

ಶಕ್ತಿ ದಾಸ್‌ ಎಂಬಾತ 2025ರ ಫೆಬ್ರವರಿ ತಿಂಗಳಿನಲ್ಲಿ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದನು. ಆದರೆ ಪೊಲೀಸ್‌ ವೆರಿಫಿಕೇಶನ್‌ ವೇಳೆ ಆತ ನೀಡಿದ್ದ ವಿಳಾಸವು ದಾಖಲಾತಿಗಳಿಗೆ ತಾಳೆಯಾಗದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ತದನಂತರ ಜೂನ್‌ನಲ್ಲಿ ಆತ ಮತ್ತೆ ಮರು ಅರ್ಜಿ ಸಲ್ಲಿಸಿದ್ದನು.

ಈ ಮರು ಅರ್ಜಿಯ ಪರಿಶೀಲನೆಯ ಹೊಣೆ ಹೊತ್ತಿದ್ದ ಠಾಣಾ ಸಿಬ್ಬಂದಿ ಪ್ರದೀಪ್‌, ಸಂಬಂಧಪಟ್ಟ ಬೀಟ್‌ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಗಮನಕ್ಕೆ ಬಾರದಂತೆ ಅವರ ಹೆಸರಿನಲ್ಲೇ ನಕಲಿ ವರದಿ ಸಿದ್ಧಪಡಿಸಿದ್ದರು. ಅಷ್ಟೇ ಅಲ್ಲದೆ, ಸಾಬು ಮಿರ್ಜಿ ಅವರ ಸಹಿಯನ್ನು ಫೋರ್ಜರಿ ಮಾಡಿ ಮೇಲಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಪಾಸ್‌ಪೋರ್ಟ್‌ ಹಾಗೂ ಪೊಲೀಸ್‌ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಸಿಗುವಂತೆ ಮಾಡಿದ್ದರು. ಬಳಿಕ ಈ ಅಕ್ರಮ ಯಾರಿಗೂ ತಿಳಿಯಬಾರದೆಂದು ಸಂಬಂಧಪಟ್ಟ ಕಡತಗಳನ್ನು ನಾಶಪಡಿಸಿದ್ದರು ಎನ್ನಲಾಗಿದೆ.

ಡಿಸೆಂಬರ್ 19ರಂದು ಕಚೇರಿಯ ದಾಖಲೆಗಳನ್ನು ಪರಿಶೀಲಿಸಿದಾಗ ಈ ಗಂಭೀರ ಲೋಪ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರದ ಪ್ರಮುಖ ಗುರುತಿನ ಚೀಟಿಯಾದ ಪಾಸ್‌ಪೋರ್ಟ್‌ ಪಡೆಯಲು ಅಪರಾಧಿಕ ನಂಬಿಕೆ ದ್ರೋಹ ಎಸಗಿದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರ ಸೂಚನೆಯ ಮೇರೆಗೆ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ, ಪೊಲೀಸ್ ಸಿಬ್ಬಂದಿ ಪ್ರದೀಪ್‌ನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ತುರ್ತು ಚಿಕಿತ್ಸಾ ಘಟಕ ಆರಂಭಿಸಿದ ʻಯೆನೆಪೋಯ ಕೇರ್‌ʼ

ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆರೋಗ್ಯ ಸೇವಾ ಉಪಕ್ರಮವಾದ ‘ಯೆನೆಪೊಯ...

ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು...

ಬಾಗಲಕೋಟೆ | ಟನ್‌ ಕಬ್ಬಿಗೆ 3800 ರೂ. ಬೆಂಬಲ ಬೆಲೆ ಘೋಷಣೆ; ಸಂಘಟಿತ ಹೋರಾಟಕ್ಕೆ ಸಂದ ಜಯ

ಬಾಗಲಕೋಟೆ ಜಿಲ್ಲೆಯ ರನ್ನನ ನಾಡು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಿ....