ಯುವಕನೋರ್ವನಿಗೆ ಮುಸುಕುಧಾರಿಗಳ ತಂಡವೊಂದು ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗಾಯಗೊಂಡ ಹಮೀದ್ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಸ್ಥಳೀಯ ನಿವಾಸಿಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ವೈಷಮ್ಯದಿಂದ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಪೊಲೀಸರು ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.
